ಸೋಮವಾರ, ಜೂನ್ 1, 2020
27 °C

ಎಐಸಿಸಿ ವಿರುದ್ಧ ಎಫ್‌ಐಆರ್‌ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಕೋವಿಡ್‌–19 ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಸ್ಥಾಪಿಸಿದ ‘ಪಿಎಂ ಕೇರ್‌ ನಿಧಿ’ಯ ಬಗ್ಗೆ ತಪ್ಪು ಮಾಹಿತಿ ನೀಡಿ ಗೊಂದಲ ಸೃಷ್ಟಿಸಿದ ಆರೋಪದ ಮೇರೆಗೆ ಕಾಂಗ್ರೆಸ್‌ ವಿರುದ್ಧ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸೋನಿಯಾ ಗಾಂಧಿ ಟೀಕಿಸಿದ್ದರು ಎನ್ನಲಾದ ಮಾಹಿತಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿತ್ತು. ಇದರ ವಿರುದ್ಧ ವಕೀಲ ಧನಂಜಯ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಸೋನಿಯಾ ಗಾಂಧಿ ಅವರ ಹೆಸರಿದೆ. ಆದರೆ, ಎಫ್‌ಐಆರ್‌ನ ಆರೋಪಿತರ ಪಟ್ಟಿಯಲ್ಲಿ ಅಪರಿಚಿತ ಎಂದಷ್ಟೇ ನಮೂದಿಸಲಾಗಿದೆ.

‘ದೂರಿನಲ್ಲಿ ಅವಹೇಳನ ಮಾಡಿದ ವ್ಯಕ್ತಿಯ ಸ್ಪಷ್ಟ ಉಲ್ಲೇಖವಿಲ್ಲ. ಸ್ಥಳ ಹಾಗೂ ಸಮಯದ ಬಗ್ಗೆಯೂ ಮಾಹಿತಿ ಇಲ್ಲ. ಹೀಗಾಗಿ, ಅಪರಿಚಿತ ವ್ಯಕ್ತಿ ಎಂದಷ್ಟೇ ನಮೂದಿಸಲಾಗಿದೆ. ತನಿಖೆಯ ಸಂದರ್ಭದಲ್ಲಿ ಆರೋಪಿತರನ್ನು ಪತ್ತೆ ಮಾಡಲಾಗುವುದು’ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು