ಶಾಸಕ ಚಂದ್ರಪ್ಪ ವಿರುದ್ಧ ಎಫ್‌ಐಆರ್‌

7

ಶಾಸಕ ಚಂದ್ರಪ್ಪ ವಿರುದ್ಧ ಎಫ್‌ಐಆರ್‌

Published:
Updated:
Prajavani

ಚಿತ್ರದುರ್ಗ: ‘ಪೊಲೀಸ್‌ ಠಾಣೆಗೆ ಬೆಂಕಿ ಹಾಕ್ತೇವಿ’ ಎಂಬ ಹೇಳಿಕೆ ನೀಡಿದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 189, 504 ಹಾಗೂ 506 ಅಡಿಯಲ್ಲಿ ದೂರು ದಾಖಲಾಗಿದೆ. ಪೊಲೀಸ್‌ ಇಲಾಖೆಗೆ ಬಹಿರಂಗವಾಗಿ ಬೆದರಿಕೆ ಹಾಕಿದ ಹಾಗೂ ಪ್ರಚೋದನೆ ನೀಡಿದ ಆರೋಪದ ಮೇರೆಗೆ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮರಳು ಅಕ್ರಮ ಗಣಿಗಾರಿಕೆಯ ವಿರುದ್ಧ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಶಾಸಕರು, ಈ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !