ಜಗಳೂರು ತಾಲ್ಲೂಕಿನ ಗಡಿಮಾಕುಂಟೆ ಗ್ರಾಮದಲ್ಲಿ ಅಗ್ನಿ ಅವಘಡ

7
ಇಡೀ ರಾತ್ರಿ ಹೊತ್ತು ಉರಿದ ಕಣಗಳು

ಜಗಳೂರು ತಾಲ್ಲೂಕಿನ ಗಡಿಮಾಕುಂಟೆ ಗ್ರಾಮದಲ್ಲಿ ಅಗ್ನಿ ಅವಘಡ

Published:
Updated:

ಜಗಳೂರು: ತಾಲ್ಲೂಕಿನ ಗಡಿಮಾಕುಂಟೆ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು 10ಕ್ಕೂ ಹೆಚ್ಚು ರೈತರ ಕಣಗಳಲ್ಲಿದ್ದ ಮೆದೆ ಬೆಂಕಿಗೆ ಆಹುತಿಯಾಗಿದೆ.

ರೈತರು ವರ್ಷವಿಡೀ ಕಷ್ಟಪಟ್ಟು ಬೆಳೆದಿದ್ದ ಮೆಕ್ಕೆಜೋಳ, ಶೇಂಗಾ ಬೆಳೆಯ ಮೆದೆಗಳು ಭಸ್ಮವಾಗಿವೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಜಗಳೂರು, ಕೊಟ್ಟೂರು, ಕೂಡ್ಲಿಗಿಯಿಂದ ಅಗ್ನಿಶಾಮಕ ವಾಹನಗಳು ಆಗಮಿಸಿ ನಸುಕಿನವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿಯ ಜ್ವಾಲೆ ಗ್ರಾಮಕ್ಕೆ ಹರಡುವುದನ್ನು ತಡೆಗಟ್ಟುವಲ್ಲಿ ಯಶಸ್ವಿಯಾದವು. ಇದರಿಂದ ಭಾರಿ ಅನಾಹುತ ತಪ್ಪಿತು.

ಗಡಿಮಾಕುಂಟೆ ಗ್ರಾಮವು ಜಗಳೂರಿನಿಂದ 20 ಕಿ.ಮೀ ದೂರದಲ್ಲಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !