ಚಿತ್ರದುರ್ಗ: ‘ಎಸ್ಎಸ್ಎಲ್ಸಿ ಪರೀಕ್ಷಾ ನಿಯಮಾವಳಿ ಬದಲಾವಣೆಯಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕಲಿಕೆಯಲ್ಲಿ ಹಿಂದುಳಿದ, ನಿಧಾನ ಕಲಿಕಾ ಮಕ್ಕಳ ಕಡೆ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು’ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪ್ರಾಂಶುಪಾಲ ಎಂ.ನಾಸಿರುದ್ದೀನ್ ಹೇಳಿದರು.

ಇಲ್ಲಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ (ಡಯಟ್) ಸೋಮವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಸಮಾಜ ವಿಜ್ಞಾನ ವಿಷಯ ಶಿಕ್ಷಕರ ಮರುಸಿಂಚನ, ಜ್ಞಾನಸೇತು, ಮೌಲ್ಯಶಿಕ್ಷಣ ಮತ್ತು ಪೋಕ್ಸೋ ಕಾಯಿದೆಗಳ ಆರು ದಿನಗಳ ತರಬೇತಿ ಉದ್ಘಾಟಿಸಿ ಮಾತನಾಡಿದ ಅವರು, ‘ನಿರಂತರ ಶ್ರಮವಹಿಸುವ ಮೂಲಕ ಎಸ್ಎಸ್ಎಲ್ಸಿ ಫಲಿತಾಂಶ ಶೇ.100ರಷ್ಟು ತಲುಪಲು ಪ್ರಯತ್ನಿಸಬೇಕು’ ಎಂದು ತಿಳಿಸಿದರು.

‘ಈಗಾಗಲೇ ನೀಲನಕ್ಷೆ ಹಾಗೂ ನಾಲ್ಕು ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಇದು ಉತ್ತೀರ್ಣಕ್ಕೆ ಸಹಾಯಕವಾಗಬಹುದು. ಯಾವುದೇ ಹಂತದಲ್ಲೂ ನಿರ್ಲಕ್ಷ್ಯವಹಿಸಬೇಡಿ. ಒಂದು ಅಂಕ ಕಡಿಮೆಯಾದರು ಸಹ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ’ ಎಂದು ಎಚ್ಚರಿಸಿದರು.

‘ಜಿಲ್ಲೆಯ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರಿಗೆ ಒಂದು ತಿಂಗಳಿಂದ ಸುಮಾರು 580ಕ್ಕೂ ಹೆಚ್ಚು ಮರು ಸಿಂಚನ, ಜ್ಞಾನಸೇತು, ಪೋಕ್ಸೋ, ಮೌಲ್ಯಶಿಕ್ಷಣ, ವೃತ್ತಿ ಮಾರ್ಗದರ್ಶನ, ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ತರಬೇತಿ ನೀಡಲಾಗಿದೆ. ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ವೃತ್ತಿ ಮಾರ್ಗದರ್ಶನ ಅಗತ್ಯ ಹಾಗೂ ಉತ್ತಮ ಭವಿಷ್ಯ ರೂಪಿಸಲು ಮೌಲ್ಯಶಿಕ್ಷಣ ಅಗತ್ಯವಾಗಿದೆ’ ಎಂದರು.

‘ಬರದನಾಡು ಚಿತ್ರದುರ್ಗ ಶಿಕ್ಷಣ ಕ್ಷೇತ್ರದಲ್ಲಿ ಮುಂದುವರೆಯುತ್ತಿದೆ. ಎಲ್ಲ ವಿಷಯ ಶಿಕ್ಷಕರು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿ ಪರೀಕ್ಷಾ ಭಯ ಹೋಗಲಾಡಿಸುವ ಮೂಲಕ ಶೇ.100ರಷ್ಟು ಫಲಿತಾಂಶ ತರಲು ಶ್ರಮಿಸಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ತಿಳಿಸಿದರು.

ತರಬೇತಿಯ ನೋಡಲ್ ಅಧಿಕಾರಿ ಜ್ಞಾನೇಶ್ವರಿ ತರಬೇತಿಯು ಫಲಿತಾಂಶ ಸುಧಾರಣೆ ಸಹಾಯವಾಗುವ ರೂಪುರೇಷೆಗಳನ್ನು ವಿವರಿಸಿದರು. ಸಮಾಜ ವಿಜ್ಞಾನ ವಿಷಯದ ನಿಧಾನ ಕಲಿಕಾ ಮಕ್ಕಳಿಗೆ ಸಿದ್ದಪಡಿಸಿದ ಮಿಷನ್ 40+ ಬಿಡುಗಡೆಗೊಳಿಸಲಾಯಿತು.

ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕರಾದ ಕೆ.ಜೆ.ಪ್ರಶಾಂತ, ನಿತ್ಯಾನಂದ, ಡಯಟ್ ಉಪನ್ಯಾಸಕರಾದ ಎಸ್.ರವಿ ಬಸವರಾಜ್, ರೇವಣ್ಣ, ರಾಮಚಂದ್ರಪ್ಪ ಇದ್ದರು.

ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಪ್ರಗತಿ ಕಾಣಬೇಕು. ವಿಷಯವಾರು ಶಿಕ್ಷಕರು ಮಕ್ಕಳ ಕಲಿಕಾ ಗುಣಮಟ್ಟ ತಿಳಿದು ಸುಧಾರಣೆ ತರುವ ಕೆಲಸ ಮಾಡಬೇಕು. ಆಗ ಫಲಿತಾಂಶ ಪ್ರಮಾಣ ಏರಿಕೆ ಕಾಣಲಿದೆ.
– ಎಂ.ನಾಸಿರುದ್ದೀನ್, ಪ್ರಾಂಶುಪಾಲ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ

ವಿದ್ಯಾರ್ಥಿಗಳಲ್ಲಿ ಅಭಿವ್ಯಕ್ತಿ ಸಾಮರ್ಥ್ಯ ಬೆಳೆಸಿ

‘ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಅಭಿವ್ಯಕ್ತಿ ಸಾಮರ್ಥ್ಯ ಬೆಳೆಸಬೇಕು . ಆಗ ಮಾತ್ರ ಕಲಿಕೆ ಫಲಿತಾಂಶದಲ್ಲಿ ಪ್ರಗತಿ ಕಾಣಲು ಸಾಧ್ಯವಾಗುತ್ತದೆ’ ಎಂದು ಡಯಟ್ನ ಹಿರಿಯ ಉಪನ್ಯಾಸಕ ಅಶ್ವಥ್ ನಾರಾಯಣ ತಿಳಿಸಿದರು.

ಇಲ್ಲಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ (ಡಯಟ್) ಶಾಲಾ ಶಿಕ್ಷಣ ಇಲಾಖೆ ಡಿಎಸ್ಇಆರ್ಟಿ ಮತ್ತು ಅಜೀಮ್ ಫ್ರೇಮ್ಜಿ ಫೌಂಡೇಶನ್ ಸಹಯೋಗದಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸೋಮವಾರ ಆಯೋಜಿಸಿದ್ದ ಇಎಲ್ಇಸಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಶಿಕ್ಷಕರು ತರಗತಿ ಕೋಣೆಯಲ್ಲಿ ಇಂಗ್ಲಿಷ್ ಭಾಷೆ ಕಲಿಯಲು ಕಲಿಕಾ ವಾತಾವರಣವನ್ನು ಸೃಜಿಸಬೇಕು. ಈ ಮೂಲಕ ಮಕ್ಕಳಿಗೆ ಭಾಷೆಯಲ್ಲಿ ಅಭಿವ್ಯಕ್ತಿ ಮತ್ತು ಸಂವಹನ ಸಾಮರ್ಥ್ಯ ಬೆಳೆಸಬೇಕು’ ಎಂದರು.

‘ಭಾಷೆಯನ್ನು ಯಾಂತ್ರಿಕವಾಗಿ ಕಲಿಸದೆ ಭಾಷಾ ಕೌಶಲಗಳಲ್ಲಿ ಸಾಮರ್ಥ್ಯ ಬೆಳೆಸುವ ಮೂಲಕ ಪರಿಣಾಮಕಾರಿಯಾಗಿ ಕಲಿಸಬೇಕು. ಚಿತ್ರಗಳು ಕಲಿಕಾ ಸಾಮಗ್ರಿಗಳು ಮತ್ತು ಚಟುವಟಿಕೆಗಳನ್ನು ಅಳವಡಿಸಿಕೊಂಡು ಮಾತು ಓದು ಬರಹದಲ್ಲಿ ಭಾಷಾ ಪ್ರೌಢಿಮೆ ಬೆಳೆಸಬೇಕು’ ಎಂದು ಸಲಹೆ ನೀಡಿದರು.

‘ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 45 ದಿನಗಳ ಪನರ್ಬಲನ ತರಬೇತಿ ನೀಡಲಾಗುತ್ತಿದೆ. 2 ಹಂತದಲ್ಲಿ 5 ದಿನಗಳ ಮುಖಾಮುಖಿ ತರಬೇತಿಯನ್ನು 7 ಹಂತಗಳಲ್ಲಿ 5 ದಿನದ ತರಬೇತಿಯನ್ನು ವೆಬಿನಾರ್ ಮೂಲಕ ನೀಡಲಾಗುತ್ತದೆ. ಶಿಕ್ಷಕರು ಸಕ್ರಿಯವಾಗಿ ಪಾಲ್ಗೊಂಡು ತರಬೇತಿಯ ಆಶಯಗಳನ್ನು ತರಗತಿ ನಿರ್ವಹಣೆಯಲ್ಲಿ ಅನುಷ್ಠಾನ ಮಾಡುವುದರ ಮೂಲಕ ಮಕ್ಕಳಲ್ಲಿ ಭಾಷಾ ಕಲಿಕಾ ಸಾಮರ್ಥ್ಯ ಬೆಳೆಸಬೇಕು’ ನೋಡಲ್ ಅಧಿಕಾರಿ ಅರ್ಜುಮಂದ್ ಬಾನು ಎಂದು ತಿಳಿಸಿದರು.

ಉಪನ್ಯಾಸಕ ಎಸ್.ಬಸವರಾಜು ಸಂಪನ್ಮೂಲ ವ್ಯಕ್ತಿಗಳಾದ ರುದ್ರೇಶ್ ವಿದ್ಯಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.