ಚಿತ್ರದುರ್ಗ: ‘ಹಲವು ಕಾಯ್ದೆ, ಕಾನೂನುಗಳು ಇದ್ದರೂ ಪ್ರತಿನಿತ್ಯ ಅರಣ್ಯ ನಾಶವಾಗುತ್ತಿದೆ. ಅರಣ್ಯ ನಾಶ ತಡೆಯದಿದ್ದರೆ, ವಾಯು ಗುಣಮಟ್ಟ ಕಾಪಾಡದಿದ್ದರೆ ಮುಂದಿನ ತಲೆಮಾರಿಗೆ ವಿಷ ಕೊಟ್ಟಂತಾಗುತ್ತದೆ. ಮುಂದಿನ ಪೀಳಿಗೆ ಅಪಾಯ ಎದುರಿಸುವುದನ್ನು ತಡೆಯಬೇಕಿದೆ’ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.

ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ವತಿಯಿಂದ ಬುಧವಾರ ನಡೆದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಒಂದು ಕಡೆ ಕಾಡು ನಾಶವಾಗುತ್ತಿದೆ. ಇನ್ನೊಂದೆಡೆ ಕೈಗಾರಿಕೆಗಳಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಕೈಗಾರಿಕೆಗಳ ರಾಸಾಯನಿಕಯುಕ್ತ ನದಿಗೆ ಹರಿದು ಜಲ ಮಾಲಿನ್ಯ ಉಂಟಾಗುತ್ತಿದೆ’ ಎಂದರು.

‘ಜಿಲ್ಲಾಡಳಿತದ ಸಹಕಾರ ಇಲ್ಲದೆ ಮಾಲಿನ್ಯ ನಿಯಂತ್ರಣ ಸಾಧ್ಯವಿಲ್ಲ. ಹಾಗೆಯೇ ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಕಾರ ಕೂಡ ಮುಖ್ಯ. ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ರಕ್ಷಣೆಗೆ ಶ್ರಮಿಸುತ್ತಿದ್ದು ಸಾರ್ವಜನಿಕರು ಸಹಕಾರ ನೀಡಬೇಕು’ ಎಂದರು.

‘ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 1974ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧೀನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುನ್ನುಡಿ ಬರೆದರು. ಈಗ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 50 ವರ್ಷ ಪೂರೈಸಿ ರಾಜ್ಯದಾದ್ಯಂತ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವುದು ಸುವರ್ಣ ಮಹೋತ್ಸವದ ಗುರಿಯಾಗಿದೆ’ ಎಂದರು.

‘ಇಂದಿರಾ ಗಾಂಧಿ ಅವರು ಪರಿಸರ ಸಂರಕ್ಷಣೆಗೆ ಹಲವು ಕಾಯ್ದೆ ಜಾರಿಗೆ ತಂದರು. 1972ರಲ್ಲಿ ರಾಷ್ಟ್ರೀಯ ಪರಿಸರ ಯೋಜನೆ ಮತ್ತು ಸಮನ್ವಯ ಸಮಿತಿ ರಚಿಸಿದರು. ಅದೇ ವರ್ಷ ಅಳಿವಿನಂಚಿನಲ್ಲಿರುವ ಪ್ರಾಣಿ-ಪಕ್ಷಿಗಳ ಪ್ರಭೇದ ರಕ್ಷಿಸಲು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಜಾರಿಗೊಳಿಸಿದರು. 1973ರಲ್ಲಿ ಅಳಿವಿನಂಚಿನಲ್ಲಿರುವ ಹುಲಿಗಳನ್ನು ಮತ್ತು ಅವುಗಳ ಆವಾಸಸ್ಥಾನಗಳನ್ನು ರಕ್ಷಿಸಲು ಹುಲಿ ಯೋಜನೆ ರೂಪಿಸಿದರು’ ಎಂದರು.

‘ನೀರು, ವಾಯು, ಅಗ್ನಿ ನೈಸರ್ಗಿಕ ಕೊಡುಗೆಗಳಾಗಿದ್ದು, ಇವುಗಳು ಇಲ್ಲದಿದ್ದರೆ ಯಾವ ಜೀವಿಯೂ ಬದುಕಲು ಸಾಧ್ಯವಿಲ್ಲ. ಭೂಮಿ ಮತ್ತು ಆಕಾಶ ಕಲುಷಿತಗೊಂಡರೆ ನಾವು ಉಳಿಯಲು ಸಾಧ್ಯವಿಲ್ಲ’ ಎಂದು ಹಸಿರು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯಮಟ್ಟದ ಸಮಿತಿ ಅಧ್ಯಕ್ಷರಾದ ನಿವೃತ್ತ ನ್ಯಾಯಾಧೀಶ ಸುಭಾಷ್ ಆಡಿ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ ‘ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕಾರ್ಯಕ್ರಮ ಜಾರಿಗೊಳಿಸಿದೆ. ಈ ನಿಟ್ಟಿನಲ್ಲಿ ಮಾಲಿನ್ಯ ಮುಕ್ತ ಕರ್ನಾಟಕಕ್ಕಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪಣತೊಟ್ಟಿದೆ. ಮಂಡಳಿಯ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಅವರು ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೊಸ ರೂಪ ಕೊಟ್ಟ ಕ್ರಿಯಾಶೀಲ ವ್ಯಕ್ತಿಯಾಗಿದ್ದಾರೆ’ ಎಂದರು.

ಶಾಸಕರಾದ ಟಿ. ರಘುಮೂರ್ತಿ, ಎಂ. ಚಂದ್ರಪ್ಪ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಎಸ್.ಲಿಂಗರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಮುಖ್ಯ ಪರಿಸರ ಅಧಿಕಾರಿ ವಿಜಯ್ ಕುಮಾರ್, ಹಿರಿಯ ಪರಿಸರ ಅಧಿಕಾರಿ ರಮೇಶ್ ನಾಯ್ಕ್ ಇದ್ದರು.

ಪರಿಸರ ಪ್ರಶಸ್ತಿ ಪ್ರದಾನ

ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದ ಅಂಗವಾಗಿ ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಎಚ್.ಎಸ್.ಕೆ. ಸ್ವಾಮಿ ಸಿದ್ದರಾಜು ಜೋಗಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆಯ ಮಾಲತೇಶ ಅರಸ್ ಶಿವಮೊಗ್ಗ ಜಿಲ್ಲೆಯ ಡಿ.ಆರ್.ಕುಮಾರಸ್ವಾಮಿ ಪಿ.ಎಸ್.ಮಹದೇವಸ್ವಾಮಿ ಎಸ್.ಕೆ.ಮುಖಾಮುಖಿ ರಂಗ ತಂಡದ ಮಂಜುನಾಥ ಸ್ವಾಮಿ ಅವರಿಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೂ ಪುರಸ್ಕಾರ ನೀಡಿ ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.