ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೊಳಕಾಲ್ಮುರು: ಕುಡಿಯುವ ನೀರು ಪೈಪ್‌ಲೈನ್‌ಗೆ ಶಂಕುಸ್ಥಾಪನೆ

Published : 8 ಸೆಪ್ಟೆಂಬರ್ 2024, 15:26 IST
Last Updated : 8 ಸೆಪ್ಟೆಂಬರ್ 2024, 15:26 IST
ಫಾಲೋ ಮಾಡಿ
Comments

ಮೊಳಕಾಲ್ಮುರು: ತಾಲ್ಲೂಕಿನ ರಾಂಪುರ ವೇಗವಾಗಿ ಬೆಳೆಯುತ್ತಿದ್ದು, ಭವಿಷ್ಯದಲ್ಲಿ ನೀರಿನ ಸಮಸ್ಯೆಯಾಗಬಾರದು ಎಂಬ ಉದ್ದೇಶದಿಂದ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.

ತಾಲ್ಲೂಕಿನ ರಾಂಪುರದಲ್ಲಿ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಅನುಷ್ಠಾನವಾಗಲಿರುವ ಕುಡಿಯುವ ನೀರು ಪೈಪ್‌ಲೈನ್‌ ನಿರ್ಮಾಣ  ಕಾರ್ಯಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ತಾಲ್ಲೂಕಿನ ದೊಡ್ಡ ಕೆರೆ ಎಂದು ಗುರುತಿಸಿಕೊಂಡಿರುವ ಪಕ್ಕುರ್ತಿ ಕೆರೆಯಿಂದ ರಾಂಪುರಕ್ಕೆ ನೀರು ತರುವ ಯೋಜನೆ ಈ ಹಿಂದೆ ಇತ್ತು.  ಈಗ ಬೇಡಿಕೆ ಹೆಚ್ಚುತ್ತಿರುವ ಕಾರಣ 6 ಇಂಚು ಅಳತೆಯ ಹೊಸ ಪೈಪ್‌ ಹಾಕುವ ಮೂಲಕ ಮುಂದಿನ ಹಲವು ವರ್ಷಗಳವರೆಗೆ ಸಮಸ್ಯೆಯಾಗದಂತೆ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ ₹60 ಲಕ್ಷ ವಿಶೇಷ ಅನುದಾನ ಬಿಡುಗಡೆಯಾಗಿದ್ದು, ₹46 ಲಕ್ಷ ವೆಚ್ಚದಲ್ಲಿ ಪೈಪ್‌ಲೈನ್‌, ಉಳಿದ ಹಣದಲ್ಲಿ ಕೊಳವೆಬಾವಿ, ಇತರೆ ಕಾರ್ಯಗಳನ್ನು ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

ವಾಲ್ವ್‌ ಬದಲಾವಣೆ, ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, 15 ದಿನಗಳ ಒಳಗಾಗಿ ಸೇವೆ ಆರಂಭವಾಗಲಿದೆ. ಇದರಿಂದ ಗ್ರಾಮವನ್ನು ತೀವ್ರವಾಗಿ ಕಾಡುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗುವ ವಿಶ್ವಾಸವಿದೆ ಎಂದು ಶಾಸಕರು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಟಿ. ನಾಗವೇಣಿ, ಉಪಾಧ್ಯಕ್ಷೆ ಅನಂತಮ್ಮ, ಪಿಡಿಒ ಗುಂಡಪ್ಪ ಮತ್ತು ಸದಸ್ಯರು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕರರೆಡ್ಡಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳಾದ ನಾಗನಗೌಡ, ಹರೀಶ್‌, ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಸ್.‌ ಖಾದರ್‌, ಜಿಲ್ಲಾ ಉಪಾಧ್ಯಕ್ಷ ನಾಗಸಮುದ್ರ ಗೋವಿಂದಪ್ಪ, ನಜೀರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT