ಮೊಳಕಾಲ್ಮುರು: ತಾಲ್ಲೂಕಿನ ದೇವಸಮುದ್ರದಲ್ಲಿ ₹ 50 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಪಶು ಆಸ್ಪತ್ರೆ ಕಟ್ಟಡಕ್ಕೆ ಬುಧವಾರ ಶಾಸಕ ಎನ್.ವೈ. ಗೋಪಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಪಶು ಇಲಾಖೆ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗ್ರಾಮದಲ್ಲಿದ್ದ ಪಶು ಚಿಕಿತ್ಸಾಲಯ ಕಟ್ಟಡ ಶಿಥಿಲಗೊಂಡಿತ್ತು. ಆಂಧ್ರಗಡಿಯ ಪಶುಪಾಲನೆ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕಾರಣ ಹೊಸ ಕಟ್ಟಡ ನಿರ್ಮಿಸುವಂತೆ ಮನವಿ ಮಾಡಲಾಗಿತ್ತು. ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಹಳೆ ಶಾಲಾ ಕಟ್ಟಡಗಳನ್ನು ನೆಲಸಮ ಮಾಡಿ ವಿಶಾಲವಾಗಿ ಹೊಸ ಕಟ್ಟಡ ನಿರ್ಮಿಸಲು ಶಾಸಕರು ಸೂಚಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ಚಂದ್ರಣ್ಣ, ಉಪಾಧ್ಯಕ್ಷ ಕುಮಾರಸ್ವಾಮಿ, ಪಿಡಿಒ ಭೀಮಲಿಂಗಪ್ಪ, ವೈದ್ಯ ರಂಗಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.