ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

Last Updated 24 ಮಾರ್ಚ್ 2022, 3:07 IST
ಅಕ್ಷರ ಗಾತ್ರ

ಚಿತ್ರದುರ್ಗ: ದ್ವಿಚಕ್ರ (ಬೈಕ್‌) ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ, ಇಬ್ಬರು ಪುತ್ರರು ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ.

ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗಾ ಗ್ರಾಮದ ನಾಗರಾಜ್ (43), ಪತ್ನಿ ಶೈಲಜಾ (38), ಪುತ್ರ ವೀರೇಶ್ (15), ಸಂತೋಷ (13) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ನಾಗರಾಜ್ ಅವರು ಕುಟುಂಬ ಸಮೇತ ದಾವಣಗೆರೆ‌ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮದ ಜಾತ್ರೆಗೆ ತೆರಳಿದ್ದರು. ಬುಧವಾರ ತಡರಾತ್ರಿ ಸ್ವಗ್ರಾಮಕ್ಕೆ ಒಂದೇ ದ್ವಿಚಕ್ರ ವಾಹನದಲ್ಲಿ ನಾಲ್ವರು ಮರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೊಳಲ್ಕೆರೆ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಖಾಸಗಿ ಬಸ್ ಬಲಬದಿಗೆ ನುಗ್ಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT