ಚಳ್ಳಕೆರೆ: ಗ್ರಾಮೀಣ ಭಾಗದಲ್ಲಿ ಮೀನುಗಾರಿಕೆಯನ್ನು ಉತ್ತೇಜಿಸಿ ಮೀನುಗಾರರ ಆರ್ಥಿಕ ಮಟ್ಟ ಸುಧಾರಿಸುವ ಉದ್ದೇಶದಿಂದ ತಾಲ್ಲೂಕಿನ ಚೌಳೂರು ಗ್ರಾಮದ ಬ್ಯಾರೇಜ್ ಬಳಿ ಮೀನುಗಾರಿಕಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಉಚಿತ ಮೀನು ಮರಿ ದಾಸ್ತಾನು’ ಕಾರ್ಯಕ್ರಮಕ್ಕೆ ಶಾಸಕ ಟಿ. ರಘುಮೂರ್ತಿ ಚಾಲನೆ ನೀಡಿದರು.

ಬ್ಯಾರೇಜ್ ನೀರಿಗೆ ಮೀನಿನ ಮರಿಗಳನ್ನು ಬಿಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಚಳ್ಳಕೆರೆ ಕ್ಷೇತ್ರ ವ್ಯಾಪ್ತಿಯ ಇತರ ಬ್ಯಾರೇಜ್ಗಳಿಗೆ ಉಚಿತ ಮೀನಿನ ಮರಿ ದಾಸ್ತಾನು ಮಾಡುವ ಯೋಜನೆಗೆ ಹಸಿರು ನಿಶಾನೆ ತೋರಿದರು.

ಮೀನುಗಾರಿಕಾ ಇಲಾಖೆ ತಾಲ್ಲೂಕು ಅಧಿಕಾರಿ ದೀಪಾಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಾಜನಾಯ್ಕ, ಪರುಶುರಾಂಪುರ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ. ಶಶಿಧರ್, ತಾಲ್ಲೂಕು ಪಂಚಾಯಿತಿ ಕೆಡಿಪಿ ನಾಮನಿರ್ದೇಶಿತ ಸದಸ್ಯ ಬಸವರಾಜ್, ಗ್ಯಾರಂಟಿ ಸಮಿತಿ ಜಿಲ್ಲಾ ಘಟಕದ ಸದಸ್ಯ ಪ್ರಕಾಶ್, ಸ್ಥಳೀಯ ಮುಖಂಡರಾದ ತಿಪ್ಪೇಸ್ವಾಮಿ, ಚನ್ನಕೇಶವ, ದೇವರಾಜ್, ನಾಗೇಂದ್ರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.