ಶುಕ್ರವಾರ, ಅಕ್ಟೋಬರ್ 22, 2021
29 °C

ಭೂಪರಿವರ್ತೆನೆಗೆ ಲಂಚ: ಜಿ.ಪ್ರೇಮ್‌ಕುಮಾರ್‌ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಹಿರಿಯೂರು ನಗರಸಭೆಯ ಜನಪ್ರತಿನಿಧಿಗಳು ಭೂಪರಿವರ್ತನೆಗೆ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಸಾಮಾನ್ಯ ಸಭೆಯಲ್ಲಿ ಕಾನೂನು ಬಾಹಿರ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಗರಸಭೆ ಮಾಜಿ ಸದಸ್ಯ ಜಿ.ಪ್ರೇಮ್‌ಕುಮಾರ್‌ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋ‍ಪಿಸಿದರು.

‘ಮ್ಯಾಕ್ಲೂರಹಳ್ಳಿ ವ್ಯಾಪ್ತಿಯ 37 ಗುಂಟೆ ಜಮೀನನ್ನು ವಾಣಿಜ್ಯ ಉದ್ದೇಶದಿಂದ ಭೂಪರಿವರ್ತನೆ ಮಾಡಲು ಅರ್ಜಿ ಸಲ್ಲಿಸಲಾಗಿತ್ತು. ಅಗತ್ಯ ದಾಖಲೆಗಳನ್ನು ಒದಗಿಸಲಾಗಿತ್ತು. ಸೆ.15ರಂದು ನಡೆದ ಸಾಮಾನ್ಯ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಿಲ್ಲ. ವಿನಾಕಾರಣ ತಾಂತ್ರಿಕ ದೋಷದ ನೆಪ ಹೇಳಿ ನಿರಾಕರಿಸಲಾಗಿದೆ’ ಎಂದು ದೂರಿದರು.

‘ಪ್ರತಿ ಎಕರೆಯ ಭೂಪರಿವರ್ತನೆಗೆ ₹ 40 ಸಾವಿರಕ್ಕೆ ಬೇಡಿಕೆ ಇಡಲಾಗುತ್ತಿದೆ. ಲಂಚ ನೀಡಿದವರ ಕೆಲಸಗಳು ಮಾತ್ರ ನಡೆಯುತ್ತಿವೆ. ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಇಲ್ಲದ ವಿಷಯಗಳಿಗೆ ಅನುಮೋದನೆ ಸಿಕ್ಕಿದೆ. ಉದ್ಯಾನಗಳು ಕಬಳಿಕೆ ಆಗುತ್ತಿವೆ. ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಗಮನ ಹರಿಸಬೇಕು’ ಎಂದು ಮನವಿ ಮಾಡಿದರು.

ನಿವೃತ್ತ ಪೌರನೌಕರರು ಹಾಗೂ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎಲ್‌.ನಾರಾಯಣಚಾರ್‌, ರವಿ ಇದ್ದರು.

***

ಹಿರಿಯೂರು ನಗರಸಭೆ ಆಡಳಿತ ಹದಗೆಟ್ಟಿದೆ. ನಾಗರಿಕರಿಗೆ ಯಾವುದೇ ಸೇವೆಗಳು ಸಕಾಲದಲ್ಲಿ ಲಭ್ಯವಾಗುತ್ತಿಲ್ಲ. ನಗರಸಭೆ ಸೂಪರ್‌ ಸೀಡ್‌ ಮಾಡುವುದು ಸೂಕ್ತ.

ದಿವಾಕರ ನಾಯಕ್‌, ಕಾಂಗ್ರೆಸ್‌ ಮುಖಂಡ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು