ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಗಾಂಧಿ ಕಂಡ ರಾಮರಾಜ್ಯ ಕನಸು ನನಸಾಗಲಿ’

Published : 2 ಅಕ್ಟೋಬರ್ 2024, 14:33 IST
Last Updated : 2 ಅಕ್ಟೋಬರ್ 2024, 14:33 IST
ಫಾಲೋ ಮಾಡಿ
Comments

ಹೊಸದುರ್ಗ: ‘ಗಾಂಧೀಜಿ ಕಂಡ ರಾಮರಾಜ್ಯದ ಕಲ್ಪನೆಯತ್ತ ಹೊಸದುರ್ಗ ಸಾಗುತ್ತಿದೆ. ಗಾಂಧಿ ಕಂಡ ರಾಮರಾಜ್ಯದ ಕನಸು ನನಸಾಗುವತ್ತ ಎಲ್ಲರೂ ಒಗ್ಗೂಡಿ ಶ್ರಮಿಸೋಣ’ ಎಂದು ಪುರಸಭೆ ಸದಸ್ಯ ದೊಡ್ಡಯ್ಯ ಅಭಿಪ್ರಾಯಪಟ್ಟರು.

ಪುರಸಭೆ ವತಿಯಿಂದ ಪಟ್ಟಣದ ಗಾಂಧಿವೃತ್ತದಲ್ಲಿ ಬುಧವಾರ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಟ್ಟಣದ ಗಾಂಧಿ ವೃತ್ತದಲ್ಲಿನ ಗಾಂಧಿ ಪ್ರತಿಮೆ ದುಸ್ಥಿತಿಯಲ್ಲಿದ್ದು, ಶಾಸಕರ ಸಹಕಾರದಿಂದ ನೂತನ ಪ್ರತಿಮೆ ನಿರ್ಮಿಸಲಾಗಿದೆ. ಸ್ವಚ್ಛತಾ ಅಭಿಯಾನದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನವನ್ನು ಸಹ ನೀಡಲಾಗಿದೆ ಎಂದರು.

ಮುಖ್ಯಾಧಿಕಾರಿ ತಿಮ್ಮರಾಜು, ಪುರಸಭೆ ಅಧ್ಯಕ್ಷರಾದ ರಾಜೇಶ್ವರಿ ಆನಂದ್, ಉಪಾಧ್ಯಕ್ಷರಾದ ಗೀತಾ ಆಸಂದಿ ಸೇರಿದಂತೆ ಸದಸ್ಯರು ಹಾಗೂ ಸಿಬ್ಬಂದಿಯಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT