ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜವನಗೊಂಡನಹಳ್ಳಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ

Last Updated 29 ಸೆಪ್ಟೆಂಬರ್ 2022, 4:41 IST
ಅಕ್ಷರ ಗಾತ್ರ

ಹಿರಿಯೂರು:2020–21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲ್ಲೂಕಿನ ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ.

‘ಗ್ರಾಮ ಪಂಚಾಯಿತಿಗಳು ಸ್ಥಳೀಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂಬ ಉದ್ದೇಶದಿಂದ 2013–14ರಿಂದತಾಲ್ಲೂಕಿಗೆ ಒಂದು ಗ್ರಾಮ ಪಂಚಾಯಿತಿಯನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತದೆ. ಪ್ರಶಸ್ತಿಯೊಂದಿಗೆ ₹ 5 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ’ ಎಂದುಪಿಡಿಒ ಈಶ್ವರ್ ತಿಳಿಸಿದರು.

‘ಮೊದಲ ಹಂತದಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಐದು ಪಂಚಾಯಿತಿಗಳನ್ನು ಪ್ರತಿ ತಾಲ್ಲೂಕಿನಿಂದ ಆಯ್ಕೆ ಮಾಡಿ ಜಿಲ್ಲಾ ಪಂಚಾಯಿತಿ ಸಿಇಒಗೆ ಕಳಿಸಲಾಗುತ್ತದೆ. ಸಿಇಒ ನೇತೃತ್ವದ ಆಯ್ಕೆ ಸಮಿತಿ ಪಂಚಾಯಿತಿಗಳನ್ನು ಶಿಫಾರಸು ಮಾಡಿದ ರಾಜ್ಯಮಟ್ಟದ ಪರಾಮರ್ಶೆ ಸಮಿತಿಗೆ ಕಳುಹಿಸುತ್ತದೆ. ಅಲ್ಲಿ ಅಂತಿಮ ಆಯ್ಕೆ ನಡೆಯುತ್ತದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT