ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗ | ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ

Published : 4 ಸೆಪ್ಟೆಂಬರ್ 2024, 16:11 IST
Last Updated : 4 ಸೆಪ್ಟೆಂಬರ್ 2024, 16:11 IST
ಫಾಲೋ ಮಾಡಿ
Comments

ಚಿತ್ರದುರ್ಗ: ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲಸಂಪನ್ಮೂಲಗಳನ್ನು ಸಂರಕ್ಷಿಸಲು ಜಿಲ್ಲೆಯ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ತಿಳಿಸಿದ್ದಾರೆ.

ಸಾರ್ವಜನಿಕರು ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ಜಲಮೂಲಗಳು ಕಲುಷಿತಗೊಳ್ಳುತ್ತವೆ. ಇದರಿಂದ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ.

ಮೂರ್ತಿಗಳನ್ನು ಸ್ಥಳೀಯ ಸಂಸ್ಥೆಗಳು ನಿಗದಿಗೊಳಿಸುವ ಸ್ಥಳಗಳಲ್ಲಿ ವಿಸರ್ಜಿಸಬೇಕು. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ಧ್ವನಿವರ್ಧಕಗಳ ಬಳಕೆಯನ್ನು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಸಂರ್ಪೂಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆಯಾದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT