ಗುರುವಾರ , ಮೇ 26, 2022
22 °C

‘ಮೂಲಸೌಲಭ್ಯ ದೊರೆಯಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಳಲ್ಕೆರೆ: ಕಾರ್ಮಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಸ್. ಸರವಣನ್ ಹೇಳಿದರು.

ಪಟ್ಟಣದಲ್ಲಿ ಭಾನುವಾರ ನಡೆದ ಕಾರ್ಮಿಕರ ದಿನಾಚರಣೆ ಹಾಗೂ ಕಾನೂನು ಅರಿವು ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಸೌಲಭ್ಯ ಪಡೆಯಲು ಕಾರ್ಮಿಕರು ಕಡ್ಡಾಯವಾಗಿ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆಗ ಮಾತ್ರ ಮಕ್ಕಳ ವಿದ್ಯಾಭ್ಯಾಸ, ಅಪಘಾತ ಪರಿಹಾರ, ಸಹಾಯಧನ, ಪರಿಹಾರ ಮತ್ತಿತರ ಸೌಲಭ್ಯಗಳನ್ನು ಪಡೆಯಬಹುದು ಎಂದರು.

ಬಾಲಕಾರ್ಮಿಕ ಪದ್ಧತಿ ಕಾನೂನು ಬಾಹಿರವಾಗಿದೆ. 14 ವರ್ಷದ ಒಳಗಿನ ಮಕ್ಕಳನ್ನು ದುಡಿಮೆಗೆ ಹಚ್ಚುವುದು ಅಪರಾಧ. ಇದಕ್ಕೆ ₹ 20ರಿಂದ
₹ 50 ಸಾವಿರ ದಂಡ ಹಾಗೂ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಮಕ್ಕಳನ್ನು ಕೂಲಿಯ ಬದಲು ಶಾಲೆಗೆ ಕಳುಹಿಸಿ ಎಂದು ಹೇಳಿದರು.

ಉಪನ್ಯಾಸ ನೀಡಿದ ವಕೀಲ ಆರ್. ಹನುಮಂತಪ್ಪ, ‘ಕಾರ್ಮಿಕರಿಗೆ ಹಲವು ಸೌಲಭ್ಯಗಳಿವೆ. ಮಹಿಳಾ ಕಾರ್ಮಿಕರು ಹೆರಿಗೆ ಭತ್ಯೆ, ಹೆರಿಗೆ ರಜೆ, ಹಾಲುಣಿಸಲು ಅವಕಾಶ, ವಿಮೆ, ಭವಿಷ್ಯ ನಿಧಿ ಪಡೆಯಬಹುದು. ಕಾರ್ಮಿಕರಿಗೆ ಕನಿಷ್ಠ ಕೂಲಿ ಕೊಡಬೇಕು. ಪುರುಷ ಹಾಗೂ ಮಹಿಳಾ ಕಾರ್ಮಿಕರಿಗೆ ಸಮಾನ ವೇತನ ನೀಡಬೇಕು. ಮಹಿಳಾ ಕಾರ್ಮಿಕರಿಗೆ ಶೌಚಾಲಯ ಸೇರಿ ಅಗತ್ಯ ಸೌಲಭ್ಯಗಳನ್ನು ನೀಡಬೇಕು’ ಎಂದರು.

ವಕೀಲರ ಸಂಘದ ಅಧ್ಯಕ್ಷ ಎಲ್.ಕೆ. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಪುರಸಭೆ ಮುಖ್ಯಾಧಿಕಾರಿ ಎ. ವಾಸಿಂ, ವಕೀಲರ ಸಂಘದ ಕಾರ್ಯದರ್ಶಿ ಸಿದ್ದೇಶ್, ಹೆಚ್ಚುವರಿ ಸರ್ಕಾರಿ ವಕೀಲ ಜಿ.ಎಚ್. ಶಿವಕುಮಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.