ಚಿತ್ರದುರ್ಗ: ಕುಟುಂಬ ನಿರ್ವಹಣೆಗೆ ಮನೆಕೆಲಸ ಮಾಡುತ್ತಿರುವ ಮಹಿಳೆಯರ ರಕ್ಷಣೆಗೆ ಸರ್ಕಾರ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಗೃಹ ಕಾರ್ಮಿಕರ ವೃತ್ತಿ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷೆ ಗಂಗಮ್ಮ ಒತ್ತಾಯಿಸಿದರು.

‘ಮನೆ ಕೆಲಸ ಮಾಡುವ ಮಹಿಳೆಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಲೈಂಗಿಕ ಕಿರುಕುಳ ನಡೆಯುತ್ತಿವೆ. ಆದ್ದರಿಂದ ವಿವಿಧ ವಲಯಗಳ ಕಾರ್ಮಿಕರಿಗೆ ಇರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಮನೆ ಕೆಲಸ ಮಾಡುವ ಮಹಿಳೆಯರಿಗೂ ಕೇಂದ್ರ ಸರ್ಕಾರ ಒದಗಿಸಬೇಕು’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

‘ನಗರದ ತರಾಸು ರಂಗಮಂದಿರದಲ್ಲಿ ಜೂನ್ 22 ರಂದ ಅಂತರರಾಷ್ಟ್ರೀಯ ಗೃಹ ಕಾರ್ಮಿಕರ ದಿನಾಚರಣೆ ನಡೆಯಲಿದೆ. ಈ ಸಮಾರಂಭದಲ್ಲಿ ಹಕ್ಕೋತ್ತಾಯ ಮಂಡಿಸಲಾಗುತ್ತದೆ’ ಎಂದು ತಿಳಿಸಿದರು.

ಸಂಘಟನೆ ಜಿಲ್ಲಾ ಉಪಾಧ್ಯಕ್ಷೆ ಶಾರದಮ್ಮ, ಸದಸ್ಯರಾದ ಚೈತ್ರ, ಶಿಲ್ಪ, ಕಾವ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.