ಭಾನುವಾರ, ಜನವರಿ 24, 2021
18 °C
ಕೋಟೆನಗರಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ

ಗೋಹತ್ಯೆ, ಲವ್ ಜಿಹಾದ್ ನಿಷೇಧ ಖಚಿತ: ಕೆ.ಎಸ್‌ ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ‘ಗೋಹತ್ಯೆ, ಲವ್‌ ಜಿಹಾದ್‌ ಎರಡನ್ನೂ ಮುಂಬರುವ ಅಧಿವೇಶನದಲ್ಲಿ ಖಂಡಿತ ನಿಷೇಧಿಸುತ್ತೇವೆ’ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಇಲ್ಲಿನ ಕನಕ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗೋಹತ್ಯೆ ಮತ್ತು ಲವ್ ಜಿಹಾದ್ ನಿಷೇಧಿಸುವ ಬಗ್ಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ತೀರ್ಮಾನ ತೆಗೆದುಕೊಂಡಿದೆ. ಇದಕ್ಕಾಗಿ ಎಲ್ಲಾ ದಾಖಲೆ ಸಂಗ್ರಹಿಸುತ್ತಿದ್ದೇವೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದರು.

‘ಕುಮಾರಸ್ವಾಮಿ ಅವರಿಗೆ ಬಹಳ‌ ತಡವಾಗಿ ಜ್ಞಾನೋದಯವಾಗಿದೆ. ಬಿಜೆಪಿ ಜತೆ ಸಖ್ಯ ಬೆಳೆಸಿದ್ದರೆ ಅವರನ್ನೇ ಒಂದು ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಸುತ್ತಿದ್ದೆವು. ರಾಜಕಾರಣ ಎಂಬುದು ಚಕ್ರವಿದ್ದಂತೆ ತಿರುಗುವುದು ಸಾಮಾನ್ಯ’ ಎಂದು ಹೇಳಿದರು.

‘ಸಿ.ಪಿ. ಯೋಗಿಶ್ವರ್‌ಗೆ ಸಚಿವ ಸ್ಥಾನ ನೀಡುವ ವಿಚಾರ ನನಗೆ ಗೊತ್ತಿಲ್ಲ. ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರದ ನಾಯಕರು ಹಾಗೂ ಮುಖ್ಯಮಂತ್ರಿ ಅವರೇ ತೀರ್ಮಾನಿಸಲಿದ್ದಾರೆ. ಈ ಬಗ್ಗೆ ನನಗೇನು ತಿಳಿದಿಲ್ಲ’ ಎಂದು ಪಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು