ಚಿತ್ರದುರ್ಗ: ಜಿಲ್ಲೆಯಾದ್ಯಂತ ವರ್ಷದಿಂದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣ ಭೇದಿಸಿರುವ ಪೊಲೀಸರು ವಶಪಡಿಸಿಕೊಳ್ಳಲಾಗಿದ್ದ ₹ 2,13,81,667 ಮೌಲ್ಯದ ಚಿನ್ನಾಭರಣ ಹಾಗೂ ವಸ್ತುಗಳನ್ನು ಶನಿವಾರ ವಾರಸುದಾರರಿಗೆ ವಾಪಸ್ ನೀಡಿದರು.

ಒಟ್ಟು 2.2 ಕೆ.ಜಿ ಚಿನ್ನ, 23 ಕೆ.ಜಿ ಬೆಳ್ಳಿ, 81 ದ್ವಿಚಕ್ರ ವಾಹನ, 3 ನಾಲ್ಕು ಚಕ್ರ ವಾಹನ, 3 ಲಘು ವಾಹನ, 4 ಭಾರಿ ವಾಹನ ಹಾಗೂ 430 ಮೊಬೈಲ್ ಸೇರಿ 210 ಪ್ರಕರಣಗಳಲ್ಲಿ ಒಟ್ಟು ₹ 5.27 ಕೋಟಿ ಮೌಲ್ಯದ ಸಾಮಗ್ರಿಗಳನ್ನು ಪೊಲೀಸರು ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದಾರೆ. ಈ ಪೈಕಿ ₹ 2,13,81,667 ಮೌಲ್ಯದ ಚಿನ್ನಾಭರಣ ಹಾಗೂ ವಸ್ತುಗಳನ್ನು 653 ವಾರಸುದಾರಿಗೆ ಹಿಂದುರಿಗಿಸಲಾಯಿತು.

ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಾರಸುದಾರರಿಗೆ ಆಭರಣ, ವಸ್ತುಗಳನ್ನು ನೀಡಿದರು. ಇದೇ ವೇಳೆ ಅಪರಾಧ ತಡೆ ಮಾಸಾಚರಣೆ ಜಾಗೃತಿ ಪುಸ್ತಕ ಬಿಡುಗಡೆ ಮಾಡಿದರು. ಡಿಎಆರ್ ಡಿವೈಎಸ್ಪಿ ಗಣೇಶ್ ಅಪರಾಧ ತಡೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ವೇಳೆ ಸಚಿವ ಡಿ.ಸುಧಾಕರ್ ಮಾತನಾಡಿ, ‘ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚಳವಾದಂತೆ ಅಪರಾಧ ಪ್ರಕರಣಗಳೂ ಹೆಚ್ಚಾಗುತ್ತಿವೆ. ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆ ಬಲಪಡಿಸಲು ಎಲ್ಲ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. 139 ಪ್ರಕರಣಗಳಲ್ಲಿ ಒಟ್ಟು ₹ 2.13 ಕೋಟಿ ಬೆಲೆ ಬಾಳುವ ಚಿನ್ನಾಭರಣ, ವಾಹನ, ನಗದು, ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡು ವಾಪಸ್ ನೀಡಿರುವುದು ಶ್ಲಾಘನೀಯ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ‘ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ ಒಟ್ಟು ₹ 5.27 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ₹ 2.13 ಕೋಟಿ ಮೌಲ್ಯದ ವಸ್ತುಗಳನ್ನು ಸಂಬಂಧಿಸಿದ ವಾರಸುದಾರರಿಗೆ ಮರಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳನ್ನು ಅವಲೋಕಿಸಿದಾಗ ಇದರಲ್ಲಿ ಸಾಕಷ್ಟು ಪ್ರಕರಣಗಳನ್ನು ತಡೆಗಟ್ಟಬಹುದಿತ್ತು’ ಎಂದರು.

‘ಅಪರಾಧಿಕ ಪ್ರಕರಣ ಕುರಿತು ಮಹಿಳಾ ಪೊಲೀಸ್, ಸಂಚಾರಿ ಪೊಲೀಸ್ ಹಾಗೂ ಸೈಬರ್ ಪೊಲೀಸ್ ಠಾಣೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಮಹಿಳೆಯರ ರಕ್ಷಣೆ, ಆಸ್ತಿ ವಿವಾದ, ಅಪಘಾತ, ಪೋಕ್ಸೊ, ಕಳವು ಮುಂತಾದ ಪ್ರಕರಣಗಳ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಸ್ತು ಪ್ರದರ್ಶನ ಮಳಿಗೆ ತೆರೆಯಲಾಗಿದೆ. ಸಶಸ್ತ್ರ ಮೀಸಲು ಪಡೆಯಿಂದ ಆಯುಧಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಚಿತ್ರದುರ್ಗ ಡಿವೈಎಸ್ಪಿ ದಿನಕರ್, ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ, ಹಿರಿಯೂರು ಡಿವೈಎಸ್ಪಿ ಶಿವಕುಮಾರ್, ಚಿತ್ರದುರ್ಗದ ಸೈಬರ್ ಅಪರಾಧ ತಡೆ ಪೊಲೀಸ್ ಠಾಣೆ ಡಿವೈಎಸ್ಪಿ ಓಂಕಾರ್ ನಾಯಕ್ ಇದ್ದರು.

ಗಮನ ಸೆಳೆದ ವಸ್ತುಪ್ರದರ್ಶನ: ಅಪರಾಧ ತಡೆ, ರಸ್ತೆ ಸುರಕ್ಷತೆ, ಮಹಿಳಾ ಮತ್ತು ಮಕ್ಕಳ ರಕ್ಷಣೆ ಮುಂತಾದ ವಿಷಯ ಕುರಿತು ಅರಿವು ಮೂಡಿಸಲು ವಿಶೇಷ ವಸ್ತುಪ್ರದರ್ಶನ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಅಪರಾಧ ತಡೆಗಟ್ಟುವ ಕುರಿತು ಮಾರ್ಗಸೂಚಿ, ಸಲಹೆಗಳು, ವಿವಿಧ ಬಗೆಯ ಪೊಲೀಸ್ ಶಸ್ತ್ರಾಸ್ತ್ರಗಳ ಪ್ರದರ್ಶನ, ಶ್ವಾನದಳದ ಮಹತ್ವ ಕುರಿತು ವಸ್ತುಪ್ರದರ್ಶನ ಗಮನ ಸೆಳೆಯಿತು.

ಪೋಕ್ಸೊ ಪ್ರಕರಣಗಳನ್ನು ತಡೆಗಟ್ಟುವುದು, ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳು, ರಸ್ತೆ ಅಪಘಾತಗಳ ವಿಡಿಯೊ ತುಣುಕು ಪ್ರದರ್ಶನ, ವೈರ್ಲೆಸ್, ಕಂಟ್ರೋಲ್ರೂಂ, 112 ಸಹಾಯವಾಣಿ ಕಾರ್ಯನಿರ್ವಹಿಸುವ ಬಗೆ, ಅಪಘಾತ ಸಂದರ್ಭದಲ್ಲಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡುವ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಅಗ್ನಿ ಅವಘಡ ತಡೆಗಟ್ಟಲು ಅಗ್ನಿಶಾಮಕ ದಳದಿಂದ ಅಣಕು ಪ್ರದರ್ಶನ ನೀಡಲಾಯಿತು. ನಗರದ ಹಲವು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ವಸ್ತುಪ್ರದರ್ಶನ ಮಳಿಗೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ವಸ್ತುಪ್ರದರ್ಶನವು ಭಾನುವಾರ ಸಂಜೆ 6 ಗಂಟೆಯವರೆಗೂ ನಡೆಯಲಿದೆ.

ಜಿಲ್ಲಾ ಪೊಲೀಸರಿಗೆ ಧನ್ಯವಾದ...

‘ಸೀಬಾರ ಗ್ರಾಮದಲ್ಲಿ ನನ್ನ ಟ್ರ್ಯಾಕ್ಟರ್ ಟ್ರ್ಯಾಲಿ ಕಳ್ಳತನವಾಗಿತ್ತು. ಈ ಕುರಿತು ಪೊಲೀಸರಿಗೆ ದೂರು ನೀಡಿದ್ದೆ. ಪೊಲೀಸರು ಟ್ರ್ಯಾಲಿ ಹುಡುಕಿ ಕೊಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳ್ಳತನವಾದ ಬಂಗಾರ ಬೆಳ್ಳಿ ವಾಹನ ಮೊಬೈಲ್ ಫೋನ್ಗಳನ್ನು ಹುಡುಕಿ ವಾರಸುದಾರರಿಗೆ ತಲುಪಿಸಿದ್ದಾರೆ. ಪೊಲೀಸರಿಗೆ ನನ್ನ ಧನ್ಯವಾದಗಳು’ ಎಂದು ನುಲೇನೂರು ಗ್ರಾಮದ ನೂಲೇಶ್ ತಿಳಿಸಿದರು. ‘ಗಣೇಶ ಹಬ್ಬದ ವೇಳೆ ನಡೆದ ಹಿಂದೂ ಮಹಾಗಣಪತಿ ಮೆರವಣಿಗೆ ವೇಳೆ ₹ 30000 ಮೌಲ್ಯದ ನನ್ನ ಸ್ಮಾರ್ಟ್ ಫೋನ್ ಕಳುವಾಗಿತ್ತು. ಈ ಬಗ್ಗೆ ದೂರು ದಾಖಲಿಸಿದ್ದೆ. ಪೊಲೀಸರು ಮೊಬೈಲ್ ಪತ್ತೆ ಹಚ್ಚಿ ಹಿಂದಿರುಗಿಸಿದ್ದಾರೆ. ಪೊಲೀಸ್ ಕಾರ್ಯ ಶ್ಲಾಘನೀಯವಾದದ್ದು’ ಎಂದು ನಗರದ ಕೆಳಗೋಟೆ ನಿವಾಸಿ ನಿರಂಜನ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.