ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಡಿಕ್ಕಿ; ರಸ್ತೆ ದಾಟುತ್ತಿದ್ದ ಕೃಷ್ಣ ಮೃಗ ಸಾವು

Published 14 ಡಿಸೆಂಬರ್ 2023, 6:32 IST
Last Updated 14 ಡಿಸೆಂಬರ್ 2023, 6:32 IST
ಅಕ್ಷರ ಗಾತ್ರ

ಹಿರಿಯೂರು: ವಾಹನವೊಂದು ಡಿಕ್ಕಿ ಹೊಡೆದಿದ್ದರಿಂದ, ರಸ್ತೆ ದಾಟುತ್ತಿದ್ದ ಕೃಷ್ಣಮೃಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಳ್ಳಕೆರೆ ರಸ್ತೆಯಲ್ಲಿರುವ ಗನ್ನಾಯಕನಹಳ್ಳಿ ಗೇಟ್ ಸಮೀಪ ಬುಧವಾರ ನಡೆದಿದೆ.

ಅಪಘಾತದಲ್ಲಿ ಸುಮಾರು ನಾಲ್ಕು ವರ್ಷ ಪ್ರಾಯದ ಕೃಷ್ಣಮೃಗ ಮೃತಪಟ್ಟಿದೆ ಎಂದು ವಲಯ ಅರಣ್ಯಾಧಿಕಾರಿ ಶಶಿಧರ್ ತಿಳಿಸಿದ್ದಾರೆ.

ಬಯಲುಸೀಮೆ ಪ್ರದೇಶದಲ್ಲಿ ಇವುಗಳ ಸಂಖ್ಯೆ ಅಧಿಕವಾಗಿದ್ದು, ಹಿರಿಯೂರು ತಾಲ್ಲೂಕಿನ ಚಳ್ಳಕೆರೆ ರಸ್ತೆಯಲ್ಲಿನ ಹಳ್ಳಿಗಳಾದ ಬಬ್ಬೂರು, ಗೌಡನಹಳ್ಳಿ, ಪಿಲ್ಲಾಲಿ, ಹೂವಿನಹೊಳೆ, ಈಶ್ವರಗೆರೆ ಮೊದಲಾದ ಗ್ರಾಮಗಳಲ್ಲಿ ಕೃಷ್ಣಮೃಗಗಳು ಹೆಚ್ಚಾಗಿ ಕಂಡುಬರುತ್ತವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT