ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರಿಯೂರ | ಉತ್ತಮ ಮಳೆ: ಮುಂಗಾರು ಬಿತ್ತನೆಗೆ ಸಿದ್ಧತೆ

Published 22 ಮೇ 2024, 15:25 IST
Last Updated 22 ಮೇ 2024, 15:25 IST
ಅಕ್ಷರ ಗಾತ್ರ

ಹಿರಿಯೂರು: ತಾಲ್ಲೂಕಿನಲ್ಲಿ ಮೇ 21ರವರೆಗೆ ವಾಡಿಕೆ ಮಳೆ 98 ಮಿ.ಮೀ. ಇದ್ದು, ಈ ಬಾರಿ 122 ಮಿ.ಮೀ. ಮಳೆಯಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಂ.ವಿ. ಮಂಜುನಾಥ್ ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿಗೆ 37,915 ಹೆಕ್ಟೇರ್ ಸಾಮಾನ್ಯ ಬಿತ್ತನೆ ಗುರಿ ಇದ್ದು, ಈ ಬಾರಿ 236 ಹೆಕ್ಟೇರ್ ಹತ್ತಿ ಮಾತ್ರ ಬಿತ್ತನೆ ಮಾಡಲಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜದ ದಾಸ್ತಾನು ಮಾಡಿಕೊಳ್ಳಲಾಗುತ್ತಿದೆ. ಖಾಸಗಿ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ 2443 ಮೆಟ್ರಿಕ್ ಟನ್ ರಸಗೊಬ್ಬರದ ದಾಸ್ತಾನು ಇದೆ. ರೈತರು ಆತಂಕ ಪಡುವ ಅಗತ್ಯವಿಲ್ಲ. ಬಿತ್ತನೆ ಬೀಜ ಬೇಕಾದ ರೈತರು ತಮ್ಮ ಎಫ್‌ಐಡಿ ಅಥವಾ ಆಧಾರ್ ಕಾರ್ಡ್ ತೋರಿಸಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪಡೆಯಬಹುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT