ಭಾನುವಾರ, ಮಾರ್ಚ್ 26, 2023
24 °C

500ಕ್ಕೂ ಹೆಚ್ಚು ದೇಗುಲಗಳಲ್ಲಿ ಗೋಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಜಿಲ್ಲೆಯ ಸುಮಾರು 500ಕ್ಕೂ ಹೆಚ್ಚು ದೇಗುಲಗಳಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಶುಕ್ರವಾರ ‘ಗೋವು’ಗಳಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ಮುಜರಾಯಿ ಇಲಾಖೆ ಅಧೀನದಲ್ಲಿರುವ ‘ಎ’ ಮತ್ತು ‘ಬಿ’ ದರ್ಜೆಯ 8 ದೇಗುಲಗಳು, ‘ಸಿ’ ದರ್ಜೆಯ 298 ದೇಗುಲಗಳಲ್ಲೂ ಸರ್ಕಾರದ ಆದೇಶದ ಅನ್ವಯ ಶ್ರದ್ಧಾ–ಭಕ್ತಿಯಿಂದ ಗೋ ಮಾತೆಗೆ ಪೂಜೆ ಸಲ್ಲಿಸಲಾಯಿತು. ಆಯಾ ದೇಗುಲಗಳ ಅರ್ಚಕರು ಸಮಿತಿಯ ಸದಸ್ಯರೊಂದಿಗೆ ಪೂಜೆ ಸಲ್ಲಿಸಿ, ಆಹಾರ ಪದಾರ್ಥಗಳನ್ನು ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ಗೋಪೂಜೆ: ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳು ಸೇರಿ ಜಿಲ್ಲೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಖಾಸಗಿ ದೇಗುಲಗಳಿವೆ. ಆ ಪೈಕಿ ನೂರಾರು ದೇಗುಲಗಳಲ್ಲೂ ಪೂಜೆ ಜರುಗಿತು.

ಭಕ್ತಿ, ಭಾವದಿಂದ ಸಮ್ಮಿಳಿತಗೊಂಡಿದ್ದ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಗ್ರಾಮೀಣ ಪ್ರದೇಶದಲ್ಲೂ ಗೋಪೂಜೆ ನೆರವೇರಿಸಲಾಯಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.