ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಅನುಗ್ರಹ' ಯೋಜನೆ ಮುಂದುವರಿಕೆಗೆ ಸರ್ಕಾರದ ಆದೇಶ: ಮಂಜುನಾಥ್ ಪ್ರಸಾದ್

Last Updated 26 ಅಕ್ಟೋಬರ್ 2021, 9:26 IST
ಅಕ್ಷರ ಗಾತ್ರ

ಚಿತ್ರದುರ್ಗ: ಆಕಸ್ಮಿಕವಾಗಿ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡುವ 'ಅನುಗ್ರಹ' ಯೋಜನೆಯನ್ನು ಮುಂದುವರಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ತಿಳಿಸಿದರು.

ಚಿತ್ರದುರ್ಗದಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಶುಪಾಲನೆ ಇಲಾಖೆಯ ವರದಿ ಪಡೆಯುವ ವೇಳೆ ಮಾತನಾಡಿದ ಅವರು, 'ಅನುಗ್ರಹ ಯೋಜನೆ ಮುಂದುವರಿಸಲು ಇಂದು ಬೆಳಿಗ್ಗೆ ಆದೇಶ ಹೊರಡಿಸಲಾಗಿದೆ' ಎಂದರು.

ಆಕಸ್ಮಿಕವಾಗಿ ಮೃತಪಟ ಕುರಿಗಳಿಗೆ ₹ 5 ಸಾವಿರ, ದನಗಳಿಗೆ ₹ 10 ಸಾವಿರ ಹಾಗೂ ಕುರಿ‌ ಮರಿಗಳಿಗೆ ₹ 2,500 ನೀಡಲು ಆದೇಶದಲ್ಲಿ ತಿಳಿಸಲಾಗಿದೆ.

ಪಶುಸಂಗೋಪನೆ ಇಲಾಖೆಯ ಅನುಗ್ರಹ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸಿತ್ತು. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದರು.

ಶಿವಮೊಗ್ಗ ಜಿಲ್ಲೆಯ ಸಾಗರ ಬಳಿ ಮೃತಪಟ್ಟ 35 ಕುರಿಗಳ ಪೋಟೊ ಟ್ವೀಟ್ ಮಾಡಿದ ಸಿದ್ದರಾಮಯ್ಯ, 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಾಟಕ ನಿಲ್ಲಿಸಿ ಕುರಿಗಾಯಿಗಳ ಬಗ್ಗೆ ಕಾಳಜಿ ಇದ್ದರೆ ಅನುಗ್ರಹ ಯೋಜನೆಗೆ ಹಣ ಒದಗಿಸಿ' ಎಂದು ಆಗ್ರಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT