ಸೋಮವಾರ, ನವೆಂಬರ್ 29, 2021
21 °C
ಜಿಲ್ಲಾಡಳಿತದಿಂದ ಆತ್ಮೀಯ ಸ್ವಾಗತ

ಚಿತ್ರದುರ್ಗಕ್ಕೆ ರಾಜ್ಯಪಾಲರ ಮೊದಲ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಶಿವಮೊಗ್ಗ ಜಿಲ್ಲೆಗೆ ತೆರಳುತ್ತಿದ್ದ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ನಗರದಲ್ಲಿ ಬುಧವಾರ ಮಧ್ಯಾಹ್ನದ ಊಟ ಸವಿದರು.

ಇದೇ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದ ಅವರನ್ನು ಜಿಲ್ಲಾಡಳಿತ ಆತ್ಮೀಯವಾಗಿ ಸ್ವಾಗತ ಕೋರಿತು. ಸುಮಾರು ಒಂದು ಗಂಟೆ ಪ್ರವಾಸಿ ಮಂದಿರದಲ್ಲಿದ್ದ ರಾಜ್ಯಪಾಲರು ಬಳಿಕ ಪ್ರಯಾಣ ಮುಂದುವರಿಸಿದರು.

ಬೆಳಿಗ್ಗೆ 11.45ಕ್ಕೆ ಚಿತ್ರದುರ್ಗಕ್ಕೆ ಬಂದ ರಾಜ್ಯಪಾಲರಿಗೆ ಪೊಲೀಸರು ಗೌರವ ಶ್ರೀರಕ್ಷೆ ನೀಡಿದರು. ಹೋಟೆಲ್‌ ಐಶ್ವರ್ಯ ಫೋರ್ಟ್‌ನಿಂದ ತಂದಿದ್ದ ಊಟವನ್ನು ಸವಿದರು. ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ನಂದಿನಿದೇವಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.