ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿನಂದನಾ ಸಮಾರಂಭ
‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಜೀವನಕ್ಕೆ 50 ವರ್ಷ ತುಂಬಿರುವ ಕಾರಣ ಮೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಬೃಹತ್ ಅಭಿನಂದನಾ ಸಮಾರಂಭ ಆಯೋಜಿಸಲಾಗುತ್ತಿದೆ’ ಎಂದು ಗೋವಿಂದ ಕಾರಜೋಳ ತಿಳಿಸಿದರು.
‘ನಾಡಿನ ಎಲ್ಲ ಮಠಾಧೀಶರನ್ನು ಸಮಾರಂಭಕ್ಕೆ ಆಹ್ವಾನಿಸಲಾಗುವುದು. ಅಭಿನಂದನಾ ಸಮಿತಿ ಅಧ್ಯಕ್ಷರಾಗಿ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವ ಬಿ.ಶ್ರೀರಾಮುಲು ನೇಮಕಗೊಂಡಿದ್ದಾರೆ. ನಾನು ಗೌರವಾಧ್ಯಕ್ಷ. ಮಾರ್ಚ್ ಎರಡನೇ ವಾರ ಸಮಾರಂಭ ದಿನ ಅಂತಿಮಗೊಳಿಸಲಾಗುವುದು’ ಎಂದರು.