ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೊಮ್ಮೆ ನರೇಂದ್ರ ಮೋದಿ ಖಚಿತ

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿಶ್ವಾಸ
Published 27 ಏಪ್ರಿಲ್ 2024, 15:45 IST
Last Updated 27 ಏಪ್ರಿಲ್ 2024, 15:45 IST
ಅಕ್ಷರ ಗಾತ್ರ

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರವೂ ಸೇರಿ ರಾಜ್ಯದ 14 ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

‘ಬಸವಣ್ಣನ ನಾಡಿನಿಂದ ಬಂದು ಕ್ಷೇತ್ರಕ್ಕೆ ಅಭ್ಯರ್ಥಿಯಾದ ನನ್ನನ್ನು ಮತದಾರರು ಅತ್ಯಂತ ಗೌರವದಿಂದ ನಡೆಸಿಕೊಂಡಿದ್ದಾರೆ. ಉರಿ ಬಿಸಿಲಿನಲ್ಲಿ ಕೂಡ ಮತಗಟ್ಟೆಗೆ ಧಾವಿಸಿ ಹಕ್ಕು ಚಲಾವಣೆ ಮಾಡಿದ್ದಾರೆ. ಜನರು ದೇಶಕ್ಕಾಗಿ ಮತದಾನ ಮಾಡಿರುವುದು ಹೆಮ್ಮೆ ಮೂಡಿಸಿದೆ. ಗೆಲುವಿನ ಆತ್ಮವಿಶ್ವಾಸ ಹೆಚ್ಚಿಸಿದೆ’ ಎಂದು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಹರಡಿಕೊಂಡಿರುವ ಲೋಕಸಭಾ ಕ್ಷೇತ್ರದ ವ್ಯಾಪ್ತಿ ದೊಡ್ಡದು. ವಿಧಾನಸಭಾ ಕ್ಷೇತ್ರದ ಚುನಾವಣೆ ಎದುರಿಸಿದ್ದ ನನಗೆ ನಿಜಕ್ಕೂ ಇದೊಂದು ಸವಾಲಾಗಿತ್ತು. ಇಲ್ಲಿನ ಜೀವನ ಶೈಲಿ, ಜನರ ಮುಗ್ಧತೆ ಕಂಡು ಬೆರಗಾಗಿದ್ದೇನೆ. ನೀರಾವರಿ ಸೌಲಭ್ಯ ಕಲ್ಪಿಸಿದರೆ ಮಾತ್ರವೇ ಜನಜೀವನ ಮಟ್ಟ ಸುಧಾರಣೆ ಕಾಣಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಚುನಾವಣೆಯಲ್ಲಷ್ಟೇ ನಾನು ಪಕ್ಷದ ಪ್ರತಿನಿಧಿ. ಚುನಾವಣೆ ಮುಗಿದ ಬಳಿಕ ಜನನಾಯಕ. ಕ್ಷೇತ್ರ ವ್ಯಾಪ್ತಿಯ 19 ಲಕ್ಷ ಮತದಾರರ ಪ್ರತಿನಿಧಿಯಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ. ಸಾರ್ವಜನಿಕ ಜನಜೀವನ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕಾರಣ ಬೆರೆಸಲು ಇಷ್ಟಪಡುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT