ಮಂಗಳವಾರ, ಏಪ್ರಿಲ್ 13, 2021
23 °C

ಪೊಲೀಸ್ ಭದ್ರತೆಯಲ್ಲಿ ಸಂಚರಿಸಿದ ಸಾರಿಗೆ ಬಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಚಿತ್ರದುರ್ಗ: ಸಾರಿಗೆ ನೌಕರರ ಮುಷ್ಕರದ ನಡುವೆಯೂ ಮೂರು ಬಸ್ ಪ್ರಯಾಣಿಕರಿಗೆ ಬುಧವಾರ ಸೇವೆ ಒದಗಿಸಿದ್ದು, ಪೊಲೀಸ್ ಭದ್ರತೆಯಲ್ಲಿ ಸಂಚರಿಸಿದವು.

ಪೂನಾದಿಂದ ದಾವಣಗೆರೆ ಮಾರ್ಗವಾಗಿ ಬಂದಿದ್ದ ವೋಲ್ವೊ ಬಸ್ ಬೆಂಗಳೂರಿಗೆ ತೆರಳಿತು. ಪ್ರಯಾಣಿಕರು ಸಾಕಷ್ಟು ಸಂಖ್ಯೆಯಲ್ಲಿ ಬಂದಿದ್ದರಿಂದ ಕೊಟ್ಟೂರು ಮಾರ್ಗವಾಗಿ ಹೂವಿನಹಡಗಲಿ ಹಾಗೂ ಮತ್ತೊಂದು ಬಸ್ ಭರಮಸಾಗರ ಮಾರ್ಗವಾಗಿ ದಾವಣಗೆರೆಗೆ ಸಂಚರಿಸಿತು.

ಬಹುತೇಕ ನೌಕರರು ಕರ್ತವ್ಯಕ್ಕೆ ಗೈರು ಹಾಜರು ಆಗಿದ್ದಾರೆ. ನಿತ್ಯ ಜನಜಂಗುಳಿಯಿಂದ ಕೂಡಿರುತ್ತಿದ್ದ ಬಸ್ ನಿಲ್ದಾಣ ಜನರಿಲ್ಲದೇ ಬಿಕೊ ಎನ್ನುತ್ತಿದೆ. ಖಾಸಗಿ ಬಸ್ ಸಂಚಾರ ಎಂದಿನಂತಿದೆ. ಕೆಎಸ್ಆರ್‌ಟಿಸಿ ಬಸ್ ನಡುವೆ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಖಾಸಗಿ ಬಸ್ ಸೇವೆ ಒದಗಿಸುತ್ತಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು