ಮಂಗಳವಾರ, ನವೆಂಬರ್ 24, 2020
19 °C

ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಮತದಾನ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿತ್ರದುರ್ಗ ಜಿಲ್ಲೆಯ 32 ಮತಗಟ್ಟೆಯಲ್ಲಿ ಬುಧವಾರ ಮತದಾನ ಆರಂಭವಾಗಿದೆ.

ಚಿತ್ರದುರ್ಗದ ಬಾಲಕಿಯರ ಸರ್ಕಾರಿ  ಪದವಿ ಪೂರ್ವ ಕಾಲೇಜು ಸೇರಿದಂತೆ ಹಲವೆಡೆ ಬೆಳಗ್ಗೆಯಿಂದಲೇ ತುರುಸಿನ ಮತದಾನ ನಡೆಯುತ್ತಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ಬೆಂಬಲಿಗರು ಮತಗಟ್ಟೆ ಬಳಿ ಮತದಾರ ಮನವೊಲಿಕೆಗೆ ಪ್ರಯತ್ನಿಸುತ್ತಿದ್ದಾರೆ.

ಬಿಜೆಪಿಯ ಚಿದಾನಂದ ಎಂ.ಗೌಡ, ಕಾಂಗ್ರೆಸಿನ ರಮೇಶ್ ಬಾಬು, ಜೆಡಿಎಸ್ ನ ಚೌಡರೆಡ್ಡಿ ತೂಪಲ್ಲಿ ಸೇರಿ 15 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮತಗಟ್ಟೆಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಬಿಜೆಪಿ ಬಂಡಾಯ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಜಿಲ್ಲೆಯಲ್ಲಿ 13,681 ಪುರುಷ ಹಾಗೂ 7,342 ಮಹಿಳೆಯರು ಸೇರಿದಂತೆ 21,024 ಮತದಾರರು ಇದ್ದಾರೆ. ಪ್ರತಿ ಮತಗಟ್ಟೆಗೂ ವೈಯಕ್ತಿಕ ಸುರಕ್ಷಾ ಸಾಧನ ಸಹಿತ ವೈದ್ಯಕೀಯ ಕಿಟ್ ಒದಗಿಸಲಾಗಿದೆ. ಮತಗಟ್ಟೆಗೆ ಬರುವ ಮತದಾರರಿಗೆ ಕೈ ಶುಚಿಗೊಳಿಸಿಕೊಳ್ಳಲು ಸೂಚಿಸಲಾಗುತ್ತಿದೆ. ದೇಹದ ಉಷ್ಣತೆ ಪರೀಕ್ಷಿಸಿ, ಕೈಗವಸು ನೀಡಿ ಪ್ರವೇಶ ಕಲ್ಪಿಸಲಾಗುತ್ತಿದೆ.


ಮತದಾನದ ಬಳಿಕ ಮತದಾರರು ಸಂಭ್ರಮಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು