ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಾಯಿತಿ ಚುನಾವಣೆ: ಗರಿಗೆದರಿದ ಲೆಕ್ಕಾಚಾರ

ಮೊದಲ ಹಂತದಲ್ಲಿ 100, ಎರಡನೇ ಹಂತದಲ್ಲಿ 89 ಗ್ರಾಮ ಪಂಚಾಯಿತಿಗಳ ಚುನಾವಣೆ
Last Updated 30 ನವೆಂಬರ್ 2020, 13:31 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಎರಡು ಹಂತಗಳಲ್ಲಿ ನಡೆಸಲು ದಿನಾಂಕ ನಿಗದಿಗೊಳಿಸಿದ ಬೆನ್ನಲ್ಲೇ ಜಿಲ್ಲೆಯ ಪಂಚಾಯಿತಿ ಕಟ್ಟೆಗಳಲ್ಲಿ ಉತ್ಸಾಹ ಹೆಚ್ಚಾಗಿದೆ. ಕಣಕ್ಕೆ ಇಳಿಯಲು ಇಚ್ಛಿಸಿರುವ ಆಕಾಂಕ್ಷಿಗಳಲ್ಲೂ ಹುರುಪು ಬಂದಿದೆ.

ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳ ಪೈಕಿ ಚಿತ್ರದುರ್ಗ ತಾಲ್ಲೂಕಿನ 38, ಹೊಸದುರ್ಗ 33, ಹೊಳಲ್ಕೆರೆ 29 ಒಟ್ಟು 100 ಪಂಚಾಯಿತಿಗಳಿಗೆ ಡಿ. 22ರಂದು ಮೊದಲ ಹಂತದಲ್ಲಿ ಹಾಗೂ ಹಿರಿಯೂರು 33, ಚಳ್ಳಕೆರೆ 40, ಮೊಳಕಾಲ್ಮುರು 16 ಸೇರಿ ಒಟ್ಟು 89 ಗ್ರಾಮ ಪಂಚಾಯಿತಿಗಳಿಗೆ ಡಿ. 27ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಚುನಾವಣೆ ನಡೆಯಲಿದೆ.

ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದ್ದು, ಡಿ. 31ರ ಸಂಜೆ 5ರವರೆಗೂ ಮುಂದುವರಿಯಲಿದೆ. ಈ ನೀತಿ ಸಂಹಿತೆಯೂ ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ವ್ಯಾಪ್ತಿಯಲ್ಲಿನ ಪ್ರದೇಶಗಳಿಗೆ ಅನ್ವಯ ಆಗುವುದಿಲ್ಲ.

1,683 ಮತಗಟ್ಟೆ: ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳಿಗೆ ನಡೆಸಲು ಉದ್ದೇಶಿಸಿರುವ ಚುನಾವಣೆಗೆ ಸಂಬಂಧಿಸಿದಂತೆ 1,391 ಮೂಲ ಮತಗಟ್ಟೆ, ಹೆಚ್ಚುವರಿ 292 ಸೇರಿ ಒಟ್ಟು 1,683 ಮತಗಟ್ಟೆಗಳನ್ನು ಸ್ಥಾಪಿಸಲು ಜಿಲ್ಲಾ ಚುನಾವಣಾಧಿಕಾರಿ ನಿರ್ಧರಿಸಿದ್ದಾರೆ.

10,84,731 ಮತದಾರರು: 5,48,319 ಪುರುಷ, 5,36,370 ಮಹಿಳಾ ಮತ್ತು 42 ತೃತೀಯ ಲಿಂಗಿಗಳು ಸೇರಿ ಒಟ್ಟು 10,84,731 ಮತದಾರರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಆಯಾ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ನಾಮಪತ್ರ ಸ್ವೀಕಾರ, ಪರಿಶೀಲನೆ ಕಾರ್ಯಗಳು ನಡೆಯಲಿವೆ.

ಪ್ರತಿ ಮತಗಟ್ಟೆಯಲ್ಲಿ ಮತದಾರರ ಸಂಖ್ಯೆಯನ್ನು ಗರಿಷ್ಠ 1 ಸಾವಿರಕ್ಕೆ ಮಿತಗೊಳಿಸಲಾಗಿದೆ. ಮತಗಟ್ಟೆ ಪ್ರವೇಶಿಸುವ ಮೊದಲು ಮತದಾರರು ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ತಪ್ಪದೇ ಅಂತರ ಕಾಯ್ದುಕೊಳ್ಳಬೇಕು.

ಕೋವಿಡ್ ಸೋಂಕಿತರಿಗೂ ಅವಕಾಶ: ಕೋವಿಡ್ ಸೋಂಕಿತರು ಮತ್ತು ಶಂಕಿತರನ್ನು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಸಂಬಂಧಿಸಿದ ಮತಗಟ್ಟೆಗಳಲ್ಲಿ ಮತದಾನದ ಕೊನೆಯ ಒಂದು ಗಂಟೆ ಅವಧಿಯಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT