ಹೊಳಲ್ಕೆರೆ: ಗ್ರಾಮೀಣ ಭಾಗದ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ ಫೋನ್ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಆಕಾಶ್ ತಿಳಿಸಿದರು.

ಬುಧವಾರ ತಾಲ್ಲೂಕಿನ ಗಂಗಸಮುದ್ರ, ತಾಳಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ನೀರು ನಿರ್ವಹಣೆ, ಅಂಗನವಾಡಿ ಹಾಗೂ ಗ್ರಂಥಾಲಯ ಕಾಮಗಾರಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

‘ಗ್ರಾಮೀಣ ಜನರಿಗೆ ತ್ವರಿತವಾಗಿ ಸ್ಪಂದಿಸಲು ಜಿಲ್ಲಾ ಪಂಚಾಯಿತಿಯಿಂದ ಆರಂಭಿಸಿರುವ ಉಚಿತ ಗ್ರಾಮ ಫೋನ್ ಸಹಾಯವಾಣಿ–1800–425–1978 ಬಳಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಗ್ರಾಮ ಪಂಚಾಯಿತಿ ಪಿಡಿಒಗಳು ಈ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಗ್ರಾಮೀಣ ಪ್ರದೇಶದ ಸಮಸ್ಯೆಗಳಾದ ಚರಂಡಿ, ಕುಡಿಯುವ ನೀರು, ರಸ್ತೆ, ನೈರ್ಮಲ್ಯ ಮತ್ತಿತರ ಸಮಸ್ಯೆಗಳಿಗೆ ಉಚಿತ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು’ ಎಂದರು.

ಅಂಗನವಾಡಿ ಕೇಂದ್ರಗಳ ದಾಖಲಾತಿಗಳನ್ನು ಪರಿಶೀಲಿಸಿ, ಆರೋಗ್ಯ ಮತ್ತು ಮಕ್ಕಳ ಪೌಷ್ಠಿಕ ಆಹಾರ ವಿತರಣೆ ಕುರಿತು ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿಗಳಿಂದ ನಡೆಯುತ್ತಿರುವ ಗ್ರಂಥಾಲಯಗಳಲ್ಲಿ ಪುಸ್ತಕಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಗ್ರಂಥಪಾಲಕರಿಗೆ ತಿಳಿಸಿದರು.

ಉತ್ತಮ ಕಚೇರಿ ನಿರ್ವಹಣೆಗಾಗಿ ಏಳು ಸೂತ್ರಗಳ ಭಿತ್ತಿಚಿತ್ರಗಳನ್ನು ಸೂಚನಾ ಫಲಕದಲ್ಲಿ ಅಳವಡಿಸಲು ಸೂಚಿಸಿದರು. ನೀರು ನಿರ್ವಹಣೆ ಕಾಮಗಾರಿಗಳನ್ನು ವೀಕ್ಷಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸ್ವಚ್ಛ ಸಂಕೀರ್ಣ ಘಟಕಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಕಾರ್ಯಾಚರಣೆ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಗ್ರಾಮೀಣ ಕುಡಿಯುವ ನೀರು ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಅಮರನಾಥ್ ಜೈನ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಮೂರ್ತಿ, ವಾಸುದೇವ್, ಜೆಇ ಜಗದೀಶ್, ರಾಕೇಶ್, ತಾಲ್ಲೂಕು ಪಂಚಾಯಿತಿ ಇಒ ಶಿವಪ್ರಕಾಶ್, ಜಿಲ್ಲಾ ಐಇಸಿ ಸಮಾಲೋಚಕ ಬಿ.ಸಿ.ನಾಗರಾಜ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.