ಚಿತ್ರದುರ್ಗ: ‘ಪಂಚ ಗ್ಯಾರಂಟಿಗಳಿಂದಾಗಿ ಕರ್ನಾಟಕ ರಾಜ್ಯ ದೇಶಕ್ಕೆ ಮಾದರಿಯಾಗುತ್ತಿದೆ. ರಾಜ್ಯದ ತಲಾ ಆದಾಯ ಹೆಚ್ಚಳವಾಗಿದೆ ಎಂದು ಕೇಂದ್ರ ಸರ್ಕಾರದ ವರದಿಗಳೇ ತಿಳಿಸಿವೆ. ಯೋಜನೆಗಳ ಮೂಲಕ ಕೋಟೆನಾಡಿಗೆ ₹ 2,588.64 ಕೋಟಿ ವ್ಯಯಿಸಲಾಗಿದೆ’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗಾಗಿಯೇ ಒಟ್ಟು ₹ 98,500 ಕೋಟಿ ನೀಡಿದೆ. ಇದರ ನಡುವೆಯೂ ಅಭಿವೃದ್ಧಿಗಾಗಿ ಈ ವರ್ಷ ಬಜೆಟ್ನಲ್ಲಿ ₹ 1.35 ಲಕ್ಷ ಕೋಟಿ ಅನುದಾನ ಮೀಸಲಿರಿಸಿದೆ. ರಾಜ್ಯದ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸುಮಾರು ₹ 27,000 ಕೋಟಿ ಸಾಲ ನೀಡುವ ಗುರಿ ಹೊಂದಿದೆ. ಚಿತ್ರದುರ್ಗ ಜಿಲ್ಲೆ ಪದೇ ಪದೇ ಬರಕ್ಕೆ ತುತ್ತಾಗುವ ಹಿಂದುಳಿದ ಜಿಲ್ಲೆಯಾಗಿದ್ದು, ಗ್ಯಾರಂಟಿ ಯೋಜನೆಗಳು ಇಲ್ಲಿಯ ಬಡ ಜನರ ಪಾಲಿಗೆ ವರದಾನವಾಗಿದೆ’ ಎಂದರು.

‘ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 57,000 ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. 4.83 ಕೋಟಿ ಮಹಿಳೆಯರು ಉಚಿತ ಪ್ರಯಾಣಿಸಿದ್ದು, ಇದಕ್ಕಾಗಿ ₹ 202.85 ಕೋಟಿ ಹಣವನ್ನು ಸಾರಿಗೆ ನಿಗಮಕ್ಕೆ ಸರ್ಕಾರ ಪಾವತಿ ಮಾಡಿದೆ’ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ತಿಳಿಸಿದರು.

‘ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 14,03,399 ಪಡಿತರ ಚೀಟಿಗಳಿವೆ. ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ₹ 371.95 ಕೋಟಿ ಹಣವನ್ನು ವರ್ಗಾಯಿಸಲಾಗಿದೆ. ಜಿಲ್ಲೆಯಲ್ಲಿ 3,94,636 ಬಿಪಿಎಲ್ ಕಾರ್ಡ್ದಾರರಿದ್ದಾರೆ’ ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

‘ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ, ಕಳ್ಳ ಸಾಗಾಣಿಕೆ ಮಾಡುವ ಪ್ರಕರಣ ನಡೆಯುತ್ತಿದ್ದರೂ ಅಧಿಕಾರಿಗಳು ಇದನ್ನು ಗಮನಿಸುತ್ತಿಲ್ಲ. ಕಾಳಸಂತೆಕೋರರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ ಆರೋಪಿಸಿದರು.

‘ಅನ್ನಭಾಗ್ಯ ಯೋಜನೆಯಡಿ ವಿತರಣೆ ಆಗುವ ಅಕ್ಕಿಯ ತೂಕದಲ್ಲಿ ಮೋಸವಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಯೋಜನೆ ಬಗ್ಗೆ ಎಲ್ಲೂ ಲೋಪವಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಗ್ಯಾರಂಟಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಅಧಿಕಾರಿಗಳು ಮತ್ತು ಫಲಾನುಭವಿಗಳ ನಡುವಿನ ಕೊಂಡಿಯಂತೆ ಕಾರ್ಯ ನಿರ್ವಹಿಸಬೇಕು’ ಎಂದು ದಿನೇಶ್ ಗೂಳಿಗೌಡ ಸೂಚನೆ ನೀಡಿದರು.

‘ಗೃಹಲಕ್ಷ್ಮಿ ಯೋಜನೆಯಡಿ 3,98,083 ಫಲಾನುಭವಿಗಳಿದ್ದು ₹ 1617.01 ಕೋಟಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ನೋಂದಣಿಯಾದವರ ಪೈಕಿ 4,966 ಮಂದಿ ಮೃತಪಟ್ಟಿದ್ದಾರೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ತಿಳಿಸಿದರು. ‘ಫಲಾನುಭವಿಗಳು ಮೃತಪಟ್ಟಿರುವ ಕುರಿತು ಪ್ರತಿ ತಿಂಗಳು ಮಾಹಿತಿ ಕ್ರೋಢೀಕರಿಸಿ ರಾಜ್ಯ ಸಮಿತಿಗೆ ಕಳುಹಿಸಬೇಕು’ ಎಂದು ಗೂಳಿಗೌಡ ಸೂಚಿಸಿದರು.

‘ಗೃಹಜ್ಯೋತಿ ಯೋಜನೆಯಡಿ 3,79,140 ಗ್ರಾಹಕರು ನೋಂದಣಿಯಾಗಿದ್ದು ₹ 65.13 ಕೋಟಿ ಉಚಿತ ವಿದ್ಯುತ್ ಬಳಕೆ ಮಾಡಿದ್ದಾರೆ. ₹ 371.80 ಕೋಟಿ ಸಬ್ಸಿಡಿ ಪಾವತಿ ಮಾಡಲಾಗಿದೆ. ಶೇ 95.70ರಷ್ಟು ಮಂದಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ’ ಅಧಿಕಾರಿಗಳು ಮಾಹಿತಿ ನೀಡಿದರು. ‘ರಾಜ್ಯದಲ್ಲಿ 35 ಲಕ್ಷ ಕೃಷಿ ಪಂಪ್ಸೆಟ್ಗಳು ಇವೆ. ಚಿತ್ರದುರ್ಗ ಜಿಲ್ಲೆಯೊಂದರಲ್ದೇ 5 ಲಕ್ಷಕ್ಕೂ ಹೆಚ್ಚು ಕೃಷಿ ಪಂಪ್ಸೆಟ್ಗಳಿವೆ.ಸುಮಾರು ₹ 19,000 ಕೋಟಿ ಹಣವನ್ನು ರೈತರ ಪರವಾಗಿ ಸರ್ಕಾರ ಪಾವತಿಸುತ್ತಿದೆ’ ಎಂದು ಗೂಳಿಗೌಡ ಹೇಳಿದರು.

‘ಯುವನಿಧಿ ಅಡಿ 7,183 ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆಯಾಗಿ ₹ 19.03 ಕೋಟಿ ಹಣ ನೀಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು. ‘ಕೌಶಲ ತರಬೇತಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಉದ್ಯೋಗ ಮೇಳವನ್ನು ಆಯೋಜಿಸಲು ಕ್ರಮ ವಹಿಸಬೇಕು’ ಎಂದು ಗೂಳಿಗೌಡ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಉಪಾಧ್ಯಕ್ಷರಾದ ನಾಗೇಶ್ ರೆಡ್ಡಿ, ನಿರಂಜನ್, ಸದಸ್ಯರಾದ ಇಂದಿರಾ, ಅಬ್ದುಲ್ ಷಾ ವಲಿ, ಶಿವಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ ಇದ್ದರು.

ಸತ್ಯ ಹೇಳುತ್ತಿರುವ ಅಂಕಿ– ಅಂಶ

ಗ್ಯಾರಂಟಿ ಯೋಜನೆಗಳಿಂದ ಹಣದ ಕೊರತೆಯಾಗಿದೆ ಎಂದು ಸುಳ್ಳು ಅಪಪ್ರಚಾರ ಮಾಡುವ ವಿರೋಧ ಪಕ್ಷಗಳಿಗೆ ಅಂಕಿ ಅಂಶಗಳೇ ಸತ್ಯ ಹೇಳುತ್ತಿವೆ. ಕೇಂದ್ರ ಸರ್ಕಾರ ಕಳೆದ ಆಗಸ್ಟ್ ತಿಂಗಳಿನಿಂದ ನೀಡಿದ ಅಂಕಿ ಅಂಶಗಳಂತೆ ರಾಜ್ಯಗಳ ಸರಾಸರಿ ತಲಾ ಆದಾಯ ₹ 1.05 ಲಕ್ಷ ಇದ್ದರೆ ಕರ್ನಾಟಕ ರಾಜ್ಯದ ತಲಾ ಆದಾಯ ₹ 2.04 ಲಕ್ಷ ಇದೆ’ ಎಂದು ದಿನೇಶ್ ಗೂಳಿಗೌಡ ಹೇಳಿದರು.

‘ರಾಜ್ಯದ ತಲಾ ಆದಾಯ ಹೆಚ್ಚಳಕ್ಕೆ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಆರ್ಥಿಕ ತಜ್ಞರೇ ಹೇಳುತ್ತಿದ್ದಾರೆ’ ಎಂದರು.

ಫಲಾನುಭವಿಗಳ ಸಮಾವೇಶ ಶೀಘ್ರ

‘ಕೋಟೆ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಶೇ 98ರಷ್ಟು ಅನುಷ್ಠಾನವಾಗಿದೆ. ಶೀಘ್ರದಲ್ಲಿಯೇ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 300 ಜನ ಗ್ಯಾರಂಟಿ ಫಲಾನುಭವಿಗಳನ್ನು ಜಿಲ್ಲಾ ಕೇಂದ್ರಕ್ಕೆ ಕರೆಸಿ ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಂವಾದ– ಸಮಾವೇಶವನ್ನು ಆಯೋಜಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ದಿನಾಂಕ ಸ್ಥಳ ನಿಗದಿಪಡಿಸಲಾಗುವುದು’ ಎಂದು ಗೂಳಿಗೌಡ ಹೇಳಿದರು.

‘ಅದೇ ರೀತಿ ರಾಜ್ಯ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ ‘ಗ್ರಾಮ ಪಂಚಾಯತಿಗಳ ನಡೆ- ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕಡೆ’ ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದ್ದು ಇದರ ರೂಪುರೇಷೆ ಸಿದ್ಧವಾಗುತ್ತಿದೆ. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳು ಈ ಕುರಿತು ಘೋಷಣೆ ಮಾಡಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.