ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರ: ಶಾಸಕ ಗೂಳಿಹಟ್ಟಿ ಶೇಖರ್

Last Updated 5 ಜುಲೈ 2022, 4:17 IST
ಅಕ್ಷರ ಗಾತ್ರ

ಹೊಸದುರ್ಗ: ರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತವನ್ನು ಜನ ಅಪ್ಪಿಕೊಂಡು ಒಪ್ಪಿಕೊಂಡಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಗೂಳಿಹಟ್ಟಿ ಡಿ. ಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

‌ಪಟ್ಟಣದ ಹೇಮಾವತಿ ಸಮುದಾಯ ಭವನದಲ್ಲಿ ಸೋಮವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಬಿಜೆಪಿ ಕಾರ್ಯಕಾರಣಿಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬಿಜೆಪಿ ಚಟುವಟಿಕೆ ಸಕ್ರಿಯವಾಗಿ ನಡೆಯುತ್ತಿದ್ದು, ಎಲ್ಲಾ ರಾಜ್ಯಗಳಲ್ಲೂ ಪ್ರಬಲವಾಗಿ ಬೆಳೆದು ನಿಲ್ಲುತ್ತಿದೆ. ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ, ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳನ್ನು ಸಮರ್ಥವಾಗಿ ಸಂಘಟನೆಯ ಮೂಲಕ ಎದುರಿಸಲು ಈಗಿನಿಂದಲೇ ಸಿದ್ಧರಾಗಬೇಕಿದೆ’ ಎಂದು ಕಾರ್ಯಕರ್ತರಿಗೆ ಹೇಳಿದರು.

ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ, ‘ರಾಷ್ಟ್ರದಲ್ಲಿ ಇಲ್ಲಿಯವರೆಗೆ ಭ್ರಷ್ಟರಹಿತ ಆಡಳಿತವನ್ನು ನೀಡಿರುವ ಪಕ್ಷ ಬಿಜೆಪಿ. ಹಾಗಾಗಿ ಮತದಾರರು ನರೇಂದ್ರ ಮೋದಿ ಅವರ ಆಡಳಿತವನ್ನು ಒಪ್ಪಿಕೊಂಡು ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಮುಂದಿನ ಎಲ್ಲಾ ಹಂತಗಳ ಚುನಾವಣೆಗಳನ್ನು ಗೆಲ್ಲಬೇಕಿದ್ದು, ಪಕ್ಷದ ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕಿದೆ. ಅಧಿಕಾರಕ್ಕಿಂತ, ಅಭಿವೃದ್ಧಿಯೇ ಮುಖ್ಯವಾಗಿದೆ. ಪಕ್ಷದಲ್ಲಿ ವ್ಯಕ್ತಿ ಪೂಜೆ ಮಾಡದೆ, ಪಕ್ಷ ಪೂಜೆ ಮಾಡುವ ಮೂಲಕ ಪಕ್ಷ ಸೂಚಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಳಿಸೋಣ’ ಎಂದು ಹೇಳಿದರು.

‘ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈಗಿನಿಂದಲೇ ತಯಾರಿ ನಡೆಸಬೇಕಿದೆ. ಹಣ ಮತ್ತು ಜಾತಿಯಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಸಂಘಟನೆ ಅಭಿವೃದ್ಧಿಯಿಂದ ಮಾತ್ರ ಸಾಧ್ಯ’ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬುರುಡೆಕಟ್ಟೆ ರಾಜೇಶ್ ಹೇಳಿದರು.

‘ಬಿಜೆಪಿ ಸ್ವಾರ್ಥಕ್ಕಲ್ಲ. ದೇಶಕ್ಕಾಗಿ ನಿಂತಿದ್ದು, ಪಕ್ಷದ ಚಿಹ್ನೆಯಿಂದ ಗೆದ್ದವರು ನಿಷ್ಠರಾಗಿರಬೇಕೇ ಹೊರತು ವಿರುದ್ಧವಾಗಿ ನಡೆಯಬಾರದು. ವರಿಷ್ಠರು ಸಮೀಕ್ಷೆ ಮಾಡಿ ಉತ್ತಮ ವ್ಯಕ್ತಿಯನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುತ್ತಾರೆ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು’ ಎಂದು ಕಳಿಸೋಣ ಎಂದರು.

ಮಂಡಲ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕೆ.ಎಸ್. ಕಲ್ಮಟ್, ಕಾರ್ಯದರ್ಶಿ ಸಿಂಧೂ, ಮಂಡಲದ ಪ್ರಧಾನ ಕಾರ್ಯದರ್ಶಿ ಜಗದೀಶ್ ರಾಮಯ್ಯ, ಮುಖಂಡರಾದ ಗುರುಸ್ವಾಮಿ, ಪರಶುರಾಮಪ್ಪ, ಲಕ್ಷ್ಮಣಪ್ಪ, ಕೋಡಿಹಳ್ಳಿ ತಮ್ಮಣ್ಣ ಮತ್ತು ಸಾ.ಚ. ಮಂಜಯ್ಯ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT