ಶುಕ್ರವಾರ, ಅಕ್ಟೋಬರ್ 23, 2020
24 °C

ನಾಯಕನಹಟ್ಟಿ: ಗುರುತಿಪ್ಪೇರುದ್ರಸ್ವಾಮಿ ದೇವಾಲಯ ಅಭಿವೃದ್ಧಿಗೆ ಒತ್ತು ನೀಡಲು ಬದ್ಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಾಯಕನಹಟ್ಟಿ: ಇಲ್ಲಿನ ಇತಿಹಾಸ ಪ್ರಸಿದ್ಧ ಗುರು ತಿಪ್ಪೇರುದ್ರಸ್ವಾಮಿ ದೇವಾಲಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು ಎಂದು ದೇವಾಲಯದ ನೂತನ ಆಡಳಿತಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ಒಳಮಠ ದೇವಾಲಯದ ಆಡಳಿತ ಕಚೇರಿಯಲ್ಲಿ ಸೋಮವಾರ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.

ಜಿಲ್ಲೆಯ ಇತಿಹಾಸ ಪ್ರಸಿದ್ಧ ತಿಪ್ಪೇರುದ್ರಸ್ವಾಮಿ ದೇವಾಲಯವು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ‘ಎ’ ಗ್ರೇಡ್ ಮಾನ್ಯತೆ ಹೊಂದಿದೆ. ಮಧ್ಯ ಕರ್ನಾಟಕದಲ್ಲಿ ದೊಡ್ಡ ಜಾತ್ರಾ ಮಹೋತ್ಸವ ನಡೆಯುವ ಸ್ಥಳ. ಈ ದೇವಾಲಯಕ್ಕೆ ರಾಜ್ಯ ಸೇರಿ ನೆರೆಯ ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರಗಳಿಂದ ಭಕ್ತರು ಭೇಟಿ ನೀಡುತ್ತಾರೆ. ಇತರೆ ದೇವಾಲಯಗಳಂತೆ ಇಲ್ಲಿನ ದೇವಾಲಯವನ್ನು ಅಭಿವೃದ್ಧಿಗೊಳಿಸಿ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಮಾಡಬೇಕಿದೆ. ಈ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದರು.

ಪ್ರಸ್ತುತ ಕೋವಿಡ್-19 ಇರುವ ಕಾರಣ ಸರ್ಕಾರ ನೂತನ ಮಾರ್ಗಸೂಚಿಗಳ ಅನ್ವಯ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದೆ. ಆದರೆ, ಯಾವುದೇ ಧಾರ್ಮಿಕ ಮೆರವಣಿಗೆ, ಉತ್ಸವಗಳು ನಡೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಉತ್ಸವಗಳು ನಡೆಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದರು.

ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಎಸ್.ಪಿ.ಬಿ. ಮಹೇಶ್, ಸಿಬ್ಬಂದಿ ಎಸ್.ಸತೀಶ್, ವಿರೂಪಾಕ್ಷಪ್ಪ, ರುದ್ರೇಶ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.