ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ಕಬಳಿಕೆ; ಉನ್ನತ ತನಿಖೆ ನಡೆಸಿ

ಮಾಜಿ ಸಚಿವ ಎಚ್‌.ಆಂಜನೇಯ ಒತ್ತಾಯ
Last Updated 12 ಮೇ 2022, 15:15 IST
ಅಕ್ಷರ ಗಾತ್ರ

ಚಿತ್ರದುರ್ಗ: ಆಸ್ತಿ ಕಬಳಿಕೆ ಯತ್ನಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಚಂದ್ರಪ್ಪ ಕುಟುಂಬದ ವಿರುದ್ಧ ಹೊಳಲ್ಕೆರೆ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ‘ಬಿ’ ವರದಿ ಸಲ್ಲಿಸುವಂತೆ ಪೊಲೀಸರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ಮಾಜಿ ಸಚಿವ ಎಚ್.ಆಂಜನೇಯ ಆರೋಪಿಸಿದ್ದಾರೆ.

‘ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರ ಬದಲಿಗೆ ಸಿಐಡಿಗೆ ವಹಿಸಬೇಕು. ಹೈಕೋರ್ಟ್‌ ನ್ಯಾಯಾಧೀಶರ ಉಸ್ತುವಾರಿಯಲ್ಲಿ ತನಿಖೆ ನಡೆದಾಗ ಮಾತ್ರ ನಿಜಾಂಶ ಹೊರಬರಲಿದೆ. ಹೊಳಲ್ಕೆರೆ ಕ್ಷೇತ್ರ ವ್ಯಾಪ್ತಿಯ ಜನಸಾಮಾನ್ಯರ ಆಸ್ತಿಗಳಿಗೆ ರಕ್ಷಣೆ ಸಿಗಲಿದೆ. ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬರಲಿವೆ’ ಎಂದು ಒತ್ತಾಯಿಸಿದ್ದಾರೆ.

‘ಶ್ರೀಧರ್‌ ಎಂಬುವರಿಗೆ ಸೇರಿದ ಆಸ್ತಿಯನ್ನು ಅವರು ಮೃತಪಟ್ಟ ಬಳಿಕ ಕಬಳಿಕೆ ಮಾಡಲಾಗಿದೆ. ಆಸ್ತಿ ಮಾಲೀಕರ ಸಹೋದರಿ ನೀಡಿದ ದೂರನ್ನು ಸ್ವೀಕರಿಸಲು ಪೊಲೀಸರು ನಿರಾಕರಿಸಿದ್ದರು. ಪೊಲೀಸರ ಈ ಕ್ರಮದ ಹಿಂದೆ ಶಾಸಕ ಚಂದ್ರಪ್ಪ ಅವರ ಒತ್ತಡವಿತ್ತು ಎಂಬುದು ಬಹಿರಂಗವಾಗಿದೆ. ನ್ಯಾಯಾಲಯದ ಮೆಟ್ಟಿಲೇರಿದ ದೂರುದಾರರು ಎಫ್‌ಐಆರ್‌ ದಾಖಲಿಸುವಂತೆ ಆದೇಶ ತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಶಾಸಕರು ತಮ್ಮ ಪ್ರಭಾವ ಬಳಸಿ ತನಿಖೆಯ ಹಾದಿ ತಪ್ಪಿಸುವ ಷಡ್ಯಂತ್ರ ರೂಪಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಪ್ರಕರಣ ದಾಖಲಾಗುತ್ತಿದ್ದಂತೆ ಶಾಸಕರು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಿದ್ದಾರೆ. ‘ಬಿ’ ವರದಿ ಹಾಕದಿದ್ದರೆ ವರ್ಗಾವಣೆ ಮಾಡಿಸುವ ಬೆದರಿಕೆ ಹಾಕಿದ್ದಾರೆ. ಪೊಲೀಸರು ಈ ಬಗ್ಗೆ ಅಸಹಾಯಕತೆ ತೋಡಿಕೊಂಡಿದ್ದಾರೆ. ಶಾಸಕರ ಒತ್ತಡಕ್ಕೆ ಮಣಿದು ಸರಿಯಾಗಿ ತನಿಖೆ ಮಾಡದಿದ್ದರೆ ನ್ಯಾಯಾಲಯ ಛೀಮಾರಿ ಹಾಕಲಿದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT