ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

19ರಿಂದ ಹಾಲುರಾಮೇಶ್ವರಸ್ವಾಮಿ ಉತ್ಸವ

ಕೈಲಾಸ ಪರ್ವತ ಮಾದರಿ ವೀಕ್ಷಿಸಿದ ಗೂಳಿಹಟ್ಟಿ ಶೇಖರ್‌
Last Updated 17 ಫೆಬ್ರುವರಿ 2020, 6:06 IST
ಅಕ್ಷರ ಗಾತ್ರ

ಹೊಸದುರ್ಗ: ಮಹಾಶಿವರಾತ್ರಿ ಅಂಗವಾಗಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಹಾಲುರಾಮೇಶ್ವರಸ್ವಾಮಿ ಉತ್ಸವವನ್ನು ಫೆ. 19ರಿಂದ ಮೂರು ದಿನಗಳ ಕಾಲ ನಡೆಸಲಾಗುವುದು ಎಂದು ಶಾಸಕ ಗೂಳಿಹಟ್ಟಿ ಡಿ. ಶೇಖರ್‌ ತಿಳಿಸಿದರು.

ಉತ್ಸವಕ್ಕೆ ಸಿದ್ಧಗೊಳ್ಳುತ್ತಿರುವ ಕೈಲಾಸ ಪರ್ವತದ ಮಾದರಿಯನ್ನು ಭಾನುವಾರ ವೀಕ್ಷಿಸಿ ಅವರು ಮಾತನಾಡಿದರು.

‘ಹಾಲುರಾಮೇಶ್ವರ ಪುಣ್ಯಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.ಮೂರು ದಿನಗಳ ಕಾಲ ದೇಗುಲದಲ್ಲಿ ವಿಶೇಷ ಪೂಜೆ, ಅಭಿಷೇಕ, ಹೋಮ, ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿದಿನ ಸಂಜೆ 8ಕ್ಕೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಖ್ಯಾತ ಗಾಯಕರಾದ ರಾಜೇಶ್‌ ಕೃಷ್ಣನ್‌, ಅರ್ಜುನ್‌ ಜನ್ಯ ಸೇರಿ ಚಿತ್ರರಂಗದ ಖ್ಯಾತ ನಟ, ನಟಿಯರು, ಗಾಯಕರು, ಡ್ಯಾನ್ಸ್‌ ತಂಡದವರು ಬರಲಿದ್ದಾರೆ. ಸಮಾರಂಭಕ್ಕೆ ಪ್ರತಿದಿನ 10 ಸಾವಿರಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

‘ಬಯಲು ಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯ ₹ 1 ಕೋಟಿ, ಶಾಸಕರ ಅನುದಾನ ₹ 60 ಲಕ್ಷ, ವಿಶ್ವೇಶ್ವರಯ್ಯ ಜಲ ನಿಗಮದ
₹ 25 ಲಕ್ಷ ಅನುದಾನ ಬಳಸಿಕೊಂಡು ಹಾಲುರಾಮೇಶ್ವರ ಪುಣ್ಯಕ್ಷೇತ್ರದ ಜೀರ್ಣೋದ್ಧಾರ ಕಾಮಗಾರಿ ಆರಂಭಿಸ
ಲಾಗಿದೆ. ದೇವಸ್ಥಾನ ನಿರ್ಮಾಣಕ್ಕೆ ಭಕ್ತರು ದೇಣಿಗೆ ನೀಡಲು ಮುಂದಾಗುತ್ತಿದ್ದಾರೆ. ದೇಣಿಗೆ ಸಂಗ್ರಹಿಸಲು ಮುಖಂಡರ ಸಮಿತಿ ರಚಿಸಲಾಗುವುದು. 2 ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದುಭರವಸೆ ನೀಡಿದರು.

ಗಂಧರ್ವ ಇವೆಂಟ್ಸ್‌ ಮಂಜು, ಗುತ್ತಿಗೆದಾರ ತಿಮ್ಮೇಶ್‌, ಮಹೇಶ್‌ ಯಾದವ್‌, ತಿಪ್ಪಣ್ಣ, ಕುಮಾರ್‌, ನಾಗರಾಜು, ಗಿರೀಶ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT