ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಂದ್ರ– ರಾಜ್ಯ ಸರ್ಕಾರದ ವಿರುದ್ಧ ಹಮಾಲಿ ಕಾರ್ಮಿಕರ ಪ್ರತಿಭಟನೆ

Published 10 ಜುಲೈ 2024, 16:13 IST
Last Updated 10 ಜುಲೈ 2024, 16:13 IST
ಅಕ್ಷರ ಗಾತ್ರ

ಚಳ್ಳಕೆರೆ: ಕೃಷಿ ಕಾಯ್ದೆ ರದ್ದತಿ, ಕಾರ್ಮಿಕರ ಕಾನೂನು ತಿದ್ದುಪಡಿ ಹಿಂಪಡೆಯುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ತಾಲ್ಲೂಕು ಒಕ್ಕೂಟದ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಂತರ ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಕಾರ್ಮಿಕ ಸಂಘಟನೆಗಳ ಜಿಲ್ಲಾ ಮುಖಂಡ ಟಿ.ತಿಪ್ಪೇಸ್ವಾಮಿ ಮಾತನಾಡಿ, ‘ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ನಿಗದಿ ಮಾಡಬೇಕು. ತಿದ್ದುಪಡಿ ಮಾಡಿರುವ ಕಾರ್ಮಿಕ ನೀತಿಗಳನ್ನು ರದ್ದುಪಡಿಸಬೇಕು’ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಇಂದ್ರಮ್ಮ, ಪ್ರಾಥಮಿಕ ಶಾಲೆಯಲ್ಲಿ (ಎಲ್‍ಕೆಜಿ–ಯುಕೆಜಿ) ಪೂರ್ವ ಪ್ರಾಥಮಿಕ ಶಾಲೆ ತೆರೆಯುವುರಿಂದ ನೂರಾರು ಕಾರ್ಯಕರ್ತೆಯರು ಬೀದಿ ಪಾಲಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಪೂರ್ವ ಪ್ರಾಥಮಿಕ ಶಾಲೆಯನ್ನು ಆಯಾ ಅಂಗನವಾಡಿ ಕೇಂದ್ರದಲ್ಲೇ ಪ್ರಾರಂಭಿಸಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಿ ಅವರಿಗೆ ಸರ್ಕಾರದಿಂದ ಸೂಕ್ತ ವೇತನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹಮಾಲಿ ಕಾರ್ಮಿಕ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ನಿಂಗಣ್ಣ, ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ, ಎಚ್.ಒ. ನಾಗರಾಜ ಮಾತನಾಡಿದರು.

ತಹಶೀಲ್ದಾರ್ ರೇಹಾನ್‍ಪಾಷ ಮನವಿ ಸ್ವೀಕರಿಸಿದರು. ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಮ್ಮ, ಬೋರಮ್ಮ, ಈ.ನಾಗರಾಜ, ಕೆ.ನಾಗರಾಜ, ಎಸ್.ರಾಜಣ್ಣ ಕೆ.ಬಿ.ಜಯಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT