ಚಿತ್ರದುರ್ಗ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಹರ್ ಘರ್ ತಿರಂಗ ಅಭಿಯಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬಿಜೆಪಿ ವತಿಯಿಂದ ನಗರದಲ್ಲಿ ಗುರುವಾರ ದ್ವಿಚಕ್ರ ವಾಹನ ಜಾಥಾ ನಡೆಸಲಾಯಿತು.

ಚಂದ್ರವಳ್ಳಿಯಿಂದ ಆರಂಭವಾದ ಜಾಥಾ ಕನಕವೃತ್ತ, ಹೊಳಲ್ಕೆರೆ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿ ವೃತ್ತ, ಬಿ.ಡಿ.ರಸ್ತೆ, ಕೆಳಗೋಟೆ ಮಾರ್ಗವಾಗಿ ಹಳೆ ಮಾಧ್ಯಮಿಕ ಶಾಲಾ ಆವರಣ ತಲುಪಿತು.

ತ್ರಿವರ್ಣ ಧ್ವಜ ಹಿಡಿದು ದ್ವಿಚಕ್ರ ವಾಹನ ಏರಿದ ಬಿಜೆಪಿ ಕಾರ್ಯಕರ್ತರು ದೇಶಭಕ್ತಿ ಮೂಡಿಸುವ ಘೋಷಣೆ ಕೂಗಿದರು. ಸಾವಿರಕ್ಕೂ ಅಧಿಕ ಬೈಕ್ ಗಳು ಜಾಥಾದಲ್ಲಿದ್ದವು.

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುರೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ ಸೇರಿ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.