ಹೊಸದುರ್ಗ: ತಾಲ್ಲೂಕಿನ ಅಂಚಿಬಾರಿಹಟ್ಟಿಯಲ್ಲಿ (ವಿವಿ ಸಾಗರದ ಕೋಡಿ ಸಮೀಪ) ನೆಲೆಸಿರುವ ಹಾರನಕಣಿವೆ ರಂಗನಾಥ ಸ್ವಾಮಿ ದೇವರ ನೂತನ ದೇವಾಲಯದ ಪ್ರಾರಂಭೋತ್ಸವ, ಗೋಪುರ ಕಳಶ ಸ್ಥಾಪನೆ ಹಾಗೂ ಮಹಾಕುಂಭಾಭಿಷೇಕ ಸೇರಿ ಹಲವು ಕಾರ್ಯಕ್ರಮಗಳು ಏ. 29ರಿಂದ ಆರಂಭಗೊಳ್ಳಲಿವೆ.

ಏ. 29ರಂದು ಸಂಜೆ 4ಕ್ಕೆ ಗಂಗಾಪೂಜೆ, ಗಣಪತಿ ಪೂಜೆ, ಕಳಶ ಸ್ಥಾಪನೆ, ನವಗ್ರಹ ಸ್ಥಾಪನೆ, ಯಾಗ ಶಾಲಾ ಪ್ರವೇಶ, ಗಣಪತಿ ಹೋಮ ಹಾಗೂ ನವಗ್ರಹ ಹೋಮ ನಡೆಯಲಿದೆ. ಏ. 30ರಂದು ಬೆಳಿಗ್ಗೆ ರಾಕ್ಷೋಘ್ನ ಹೋಮ, ವಾಸ್ತು ಹೋಮ, ಆದಿವಾಸಾದಿ, ದೇವತಾ ಪ್ರಧಾನ ಹೋಮ ನಡೆಯಲಿದೆ.

ಮೇ 1ರಂದು ಬೆಳಿಗ್ಗೆ ಗೋಪುರ ಕಳಶ ಪ್ರತಿಷ್ಠಾಪನೆ ಮತ್ತು ಮಹಾಕುಂಭಾಭಿಷೇಕ ನಡೆಯಲಿದೆ. ಕಳಾಹೋಮ, ಪೂರ್ಣಾಹುತಿ ನಂತರ ಮಹಾಮಂಗಳಾರತಿ ಕಾರ್ಯಗಳು ನಡೆಯಲಿವೆ ಎಂದು ಹಾರನಕಣಿವೆ ರಂಗನಾಥ ಸ್ವಾಮಿ ದೇವಸ್ಥಾನ ಟ್ರಸ್ಟ್ ಸದಸ್ಯರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-44-1216261884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.