ಗಾಂಜಾ ಪ್ರಕರಣ: ಹೆಡ್ಕಾನ್ಸ್ಟೆಬಲ್ ಅಮಾನತು
ಚಿತ್ರದುರ್ಗ: ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಶ್ರೀನಿವಾಸ್ ಅಲಿಯಾಸ್ ಜಪಾನ್ ಸೀನ ಪರಾರಿಯಾದ ಪ್ರಕರಣದಲ್ಲಿ ನಗರ ಠಾಣೆಯ ಹೆಡ್ಕಾನ್ಸ್ಟೆಬಲ್ ಶ್ರೀನಿವಾಸ್ ಎಂಬುವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ಆದೇಶ ಹೊರಡಿಸಿದ್ದಾರೆ.
ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಮೇ 15ರಂದು ವಶಕ್ಕೆ ಪಡೆದಿದ್ದರು. ಇದರಲ್ಲಿ ಜಪಾನ್ ಸೀನನೂ ಇದ್ದ. ಮೂತ್ರ ವಿಸರ್ಜನೆಯ ನೆಪವೊಡ್ಡಿ ವಾಹನದಿಂದ ಇಳಿದಿದ್ದ ಆರೋಪಿ ಪರಾರಿಯಾಗಿದ್ದನು. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದರು.
ಈ ಬಗ್ಗೆ ತನಿಖೆ ನಡೆಸಿದ ಡಿವೈಎಸ್ಪಿ ಪಾಂಡುರಂಗಪ್ಪ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.