ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಫೆ.9ರಂದು ಹೃದ್ರೋಗ ಉಚಿತ ತಪಾಸಣಾ ಶಿಬಿರ

‘ಪ್ರಜಾವಾಣಿ’ ಅಮೃತ ಮಹೋತ್ಸವಕ್ಕೆ ಕೈಜೋಡಿಸಿದ ಎನ್‌ಎಚ್‌ ಆಸ್ಪತ್ರೆ
Last Updated 3 ಫೆಬ್ರುವರಿ 2023, 5:00 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಪ್ರಜಾವಾಣಿ’ಯ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಹೃದ್ರೋಗ ಉಚಿತ ತಪಾಸಣಾ ಶಿಬಿರವನ್ನು ಚಿತ್ರದುರ್ಗದಲ್ಲಿ ಫೆ.9ರಂದು ಹಮ್ಮಿಕೊಂಡಿದೆ.

ಆರ್ಯ ವೈಶ್ಯ ಸಂಘ ಹಾಗೂ ನಾರಾಯಣ ಆಸ್ಪತ್ರೆಯ ಮಾಹಿತಿ ಕೇಂದ್ರದ ಸಹಯೋಗದಲ್ಲಿ ಹೊಳಲ್ಕೆರೆ ರಸ್ತೆಯ ಸಂಗೊಳ್ಳಿ ರಾಯಣ್ಣ ವೃತ್ತದ ನರ್ಮದಾ ಹೋಮ್‌ ನೀಡ್ಸ್‌ ಕಾಂಪ್ಲೆಕ್ಸ್‌ನಲ್ಲಿ ಈ ಶಿಬಿರ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಶಿಬಿರದಲ್ಲಿ ಹೃದಯ ತಪಾಸಣೆ ನಡೆಸಲಾಗುತ್ತದೆ.

ಎದೆನೋವು, ರಕ್ತದ ಒತ್ತಡ, ಆಯಾಸ, ಅತಿಯಾದ ಬೆವರುವಿಕೆ, ಎದೆಯಲ್ಲಿ ಉರಿ, ಉಸಿರಾಟದಲ್ಲಿ ತೊಂದರೆಯಂತಹ ಸಮಸ್ಯೆಯ ಬಗ್ಗೆ ತಜ್ಞ ವೈದ್ಯರು ತಪಾಸಣೆ ಮಾಡಲಿದ್ದಾರೆ. ಇಸಿಜಿ, ಆರ್‌ಬಿಎಸ್, ರಕ್ತದ ಒತ್ತಡ ಪರೀಕ್ಷೆಯ ಜೊತೆ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 9986759486, 8884551442 ಸಂಪರ್ಕಿಸಬಹುದಾಗಿದೆ ಎಂದು ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT