ಚಿಕ್ಕಜಾಜೂರು: ಸೋಮವಾರ ಸಂಜೆ ಬೀಸಿದ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಗೆ ಸಾವಿರಾರು ಅಡಿಕೆ ಮರಗಳು ಹಾಗೂ ಹತ್ತಾರು ಮಾವಿನ ಮರಗಳು, ಮೂರು ವಿದ್ಯುತ್ ಪರಿವರ್ತಕಗಳು ಹಾಗೂ ಹತ್ತಾರು ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ತಹಶೀಲ್ದಾರ್ ಬೀಬಿ ಫಾತಿಮಾ ನೇತೃತ್ವದ ಮಂಗಳವಾರ ತಂಡ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿತು.

ಸಮೀಪದ ಚಿಕ್ಕಎಮ್ಮಿಗನೂರು ಗ್ರಾಮದಲ್ಲಿ ಸೋಮವಾರ ಬಿರುಗಾಳಿಗೆ ಅಂದಾಜು 30–40 ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಅಡಿಕೆ ತೋಟಗಳಲ್ಲಿ ಮರಗಳು ಬುಡ ಸಮೇತ ಉರುಳಿ ಬಿದ್ದಿವೆ. ಮತ್ತೆ ಕೆಲವೆಡೆ ಅರ್ಧಕ್ಕೆ ಮುರಿದು ಬಿದ್ದಿವೆ.

ಬಿರುಗಾಳಿಗೆ ಗ್ರಾಮದ ಕೆಲವು ತೋಟಗಳಲ್ಲಿದ್ದ ವಿದ್ಯುತ್ ಪರಿವರ್ತಕಗಳು ಬುಡ ಸಮೇತ ನೆಲಕ್ಕುರುಳಿವೆ. ಅಲ್ಲದೆ, ರೈತರ ಕೊಳವೆ ಬಾವಿಗಳಿಗೆ ಸಂಪರ್ಕ ಕಲ್ಪಿಸಿದ್ದ 10ಕ್ಕೂ ಹೆಚ್ಚು ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿ ಬಿದ್ದ ಪರಿಣಾಮ ಕಂಬಗಳು ಮುರಿದು ಬಿದ್ದಿವೆ. ಗ್ರಾಮದ ಹಲವು ಶೆಡ್ಗಳಿಗೆ ಹಾಕಲಾಗಿದ್ದ ತಗಡಿನ ಶೀಟ್ಗಳು ಹಾರಿಹೋಗಿವೆ.

ಚಿಕ್ಕಎಮ್ಮಿಗನೂರು ಪಿಡಿಒ ಶಶಿಕುಮಾರ್, ಬಿ.ದುರ್ಗ ಹೋಬಳಿಯ ಕಂದಾಯ ನಿರೀಕ್ಷಕ ಅನಿಲ್ಕುಮಾರ್, ಗ್ರಾಮ ಆಡಳಿತಾಧಿಕಾರಿ ಗಂಗಾಧರ್, ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು ಹಾಗೂ ರೈತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.