ಚಿತ್ರದುರ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಮೈದುಂಬಿ ಹರಿಯುತ್ತಿದೆ ಸುವರ್ಣಮುಖಿ ನದಿ

ಚಿತ್ರದುರ್ಗ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜಲಮೂಲಗಳಿಗೆ ಅಪಾರ ಪ್ರಮಾಣದ ನೀರು ಹರಿದುಬಂದಿದೆ. ಹಿರಿಯೂರು ತಾಲ್ಲೂಕಿನ ಸುವರ್ಣಮುಖಿ ನದಿ ಮೈದುಂಬಿ ಹರಿಯುತ್ತಿದೆ.
ಹಿರಿಯೂರು ತಾಲ್ಲೂಕಿನ ಹೂವಿನಹೊಳೆ ಗ್ರಾಮದಲ್ಲಿ ಸುವರ್ಣಮುಖಿ ನದಿ ಬೋರ್ಗರೆಯುತ್ತಿದೆ. ಮುಂಗಾರಿಗೂ ಮುನ್ನವೇ ಬ್ಯಾರೇಜ್, ಚೆಕ್ ಡ್ಯಾಂ ಭರ್ತಿಯಾಗಿರುವುದರಿಂದ ರೈತರಲ್ಲಿ ಸಂತಸ ಮೂಡಿದೆ. ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಸಮೀಪದ ಸೀಗೆಹಳ್ಳಿ-ಅಳಗವಾಡಿ ಹಳ್ಳ ತುಂಬಿ ಹರಿದಿದೆ.
ಬುಧವಾರ ತಡರಾತ್ರಿ ಆರಂಭವಾದ ಮಳೆ ನಸುಕಿನವರೆಗೂ ಸುರಿದಿದೆ. ಮೊಳಕಾಲ್ಮುರು, ಚಳ್ಳಕೆರೆ, ಹಿರಿಯೂರು ತಾಲ್ಲೂಕಿನ ಕೆರೆ, ಕಟ್ಟೆ, ಜಲಮೂಲಗಳು ಭರ್ತಿಯಾಗಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಹರ್ಷಗೊಂಡಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನ ಪಿಳ್ಳೆಕೇರನಹಳ್ಳಿಯ ಸರ್ಕಾರಿ ಶಾಲೆ ಆವರಣ ಜಲಾವೃತಗೊಂಡಿದೆ. ಮಲ್ಲಾಪುರ ಕೆರೆಯ ನೀರು ಶಾಲೆಗೆ ನುಗ್ಗಿದ್ದು, ಆವರಣದಲ್ಲಿರುವ ಎರಡು ಮರಗಳು ನೆಲಕ್ಕುರುಳಿರುಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.