ಶನಿವಾರ, ಡಿಸೆಂಬರ್ 4, 2021
23 °C

ಚಿತ್ರದುರ್ಗದಲ್ಲಿ ಉತ್ತಮ ಮಳೆ: ತಾರೀಕೆರೆ ಗ್ರಾಮ ಜಲಾವೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಿಲ್ಲೆಯ ಹಲವಡೆ ಶನಿವಾರ ರಾತ್ರಿ ಉತ್ತಮ ಮಳೆಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿವೆ.

ಹೊಸದುರ್ಗ ತಾಲ್ಲೂಕಿನ ಮತ್ತೋಡು ಹೋಬಳಿಯ ಗುಡ್ಡದನೆರಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಡಿ ತಾರೀಕೆರೆ ಗ್ರಾಮ ಜಲಾವೃತವಾಗಿದೆ. ಶನಿವಾರ ತಡರಾತ್ರಿಯಿಂದ ಭಾನುವಾರ ನಸುಕಿನ ವರೆಗೂ ಸುರಿದ ಭಾರಿ ಮಳೆಗೆ ಗ್ರಾಮದ ಕೆರೆ ಕೋಡಿ ಬಿದ್ದು ಮನೆಗಳಿಗೆ ನೀರು ನುಗ್ಗಿದೆ.

ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ನೀರು ಹೋರ ಹಾಕಲು ಗ್ರಾಮಸ್ಥರು ಪ್ರಯತ್ನಿಸುತ್ತಿದ್ದಾರೆ. ಜಮೀನುಗಳಿಗೂ ನೀರು ನುಗ್ಗಿದ್ದು ತೋಟದಲ್ಲಿದ್ದ ತೆಂಗಿನಕಾಯಿ ಮಳೆನೀರಿಗೆ ತೇಲಿ ಹೋಗಿವೆ.

ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ವ್ಯಾಪ್ತಿಯಲ್ಲಿ 42 ಮಿ.ಮೀ. ಮಳೆಯಾಗಿದೆ. ಮಳೆಯಿಂದಾಗಿ ಜಮೀನಿನಲ್ಲಿ ಬೆಳೆದು ನಿಂತಿದ್ದ ರಾಗಿ ಪೈರು ನೆಲಕ್ಕುರುಳಿ ಜಲಾವೃತವಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು