ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 4.5 ಕೋಟಿ ವೆಚ್ಚದಲ್ಲಿ ಹೈಟೆಕ್ ಪದವಿ ಕಾಲೇಜು

ಶಾಸಕ ಟಿ.ರಘುಮೂರ್ತಿ ಹೇಳಿಕೆ
Last Updated 21 ನವೆಂಬರ್ 2020, 14:04 IST
ಅಕ್ಷರ ಗಾತ್ರ

ಚಳ್ಳಕೆರೆ: ನಗರದ ಸರ್ಕಾರಿ ಪದವಿ ಕಾಲೇಜಿನ ಹಳೆ ಕಟ್ಟಡವನ್ನು ಕೂಡಲೇ ತೆರವುಗೊಳಿಸಿ ₹ 4.5 ಕೋಟಿ ವೆಚ್ಚದಲ್ಲಿ ಹೈಟೆಕ್ ಕಟ್ಟಡವನ್ನು ಶೀಘ್ರವೇ ನಿರ್ಮಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಅವರು ಕೆಎಚ್‍ಬಿ ಎಂಜಿಯರ್‌ಗಳಿಗೆ ಸೂಚಿಸಿದರು.

ಇಲ್ಲಿನ ಎಚ್‍ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಕ್ಷಣವೇ ಕಾಮಗಾರಿ ಆರಂಭಿಸಬೇಕು. ಕಟ್ಟಡ ನಿರ್ಮಾಣದಲ್ಲಿ ತಪ್ಪದೇ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು. 11 ತಿಂಗಳ ಒಳಗೆ ಕಟ್ಟಡವನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.

ಪದವಿ ಪರೀಕ್ಷೆಯ ಫಲಿತಾಂಶವನ್ನು ಪರಿಶೀಲಿಸಿದ ಶಾಸಕರು, ಗ್ರಾಮೀಣ ಭಾಗದ ಮಕ್ಕಳಿಗೆ ಪರಿಣಾಮಕಾರಿ ಬೋಧನೆ ಮಾಡುವುದರ ಜತೆಗೆ ಅವರ ಫಲಿತಾಂಶವನ್ನು ಹೆಚ್ಚಿಸಲು ಹೆಚ್ಚಿನ ಶ್ರಮ ಹಾಕಬೇಕು ಎಂದು ವಿಭಾಗವಾರು ಅಧ್ಯಾಪಕರಿಗೆ ಸಲಹೆ ನೀಡಿದರು.

ಅಪೂರ್ಣಗೊಂಡ ಕೆಲ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಹೈಟೆಕ್ ಕಟ್ಟಡ ಕಾಮಗಾರಿ ವಿಳಂಬ ಮಾಡದಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಬೇಕು ಎಂದು ಪ್ರಾಂಶುಪಾಲ ಪ್ರೊ.ಎಂ. ಶಿವಲಿಂಗಪ್ಪ ಮನವಿ ಮಾಡಿದರು.

ಕೆಎಚ್‍ಬಿ ವಿಭಾಗದ ಎಂಜಿನಿಯರ್ ರವೀಂದ್ರ, ಸಹಾಯಕ ಎಂಜಿನಿಯರ್ ಸುಧೀರ್, ಕೆಎಲ್‍ಡಿಆರ್ ಎಂಜಿನಿಯರ್ ದೇವರಾಜ, ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎಸ್. ಮಂಜುನಾಥ್ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು, ಸದಸ್ಯ ಬಿ.ಪಿ.ಪ್ರಕಾಶಮೂರ್ತಿ, ನಾಗೇಂದ್ರನಾಯ್ಕ, ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ, ಉಪಾಧ್ಯಕ್ಷೆ ಜೈತುನ್ಬಿ, ಸದಸ್ಯ ರಮೇಶ್‍ಗೌಡ, ಸಿಡಿಸಿ ಸಮಿತಿ ಸದಸ್ಯರಾದ ಡಿ.ಕೆ. ಅನ್ವರ್ ಅಹ್ಮದ್, ಮಂಜುಳಾ, ಕಂದಿಕೆರೆ ಸುರೇಶಬಾಬು, ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ, ಕಾಲೇಜಿನ ಮುಖ್ಯ ಅಧೀಕ್ಷಕ ಈ. ವಿನೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT