ಹಿರಿಯೂರು: ‘ಸಚಿವ ಡಿ. ಸುಧಾಕರ್ ಅವರು ಭದ್ರಾ ಮೇಲ್ದಂಡೆ ಯೋಜನೆ ಜಾರಿ ಆದೇಶ ಹೊರಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಯಲುಸೀಮೆಗೆ ಶಾಶ್ವತ ನೀರಾವರಿ ಕಲ್ಪಿಸಬೇಕೆಂಬ ಅವರ ಕನಸು ನನಸಾಗುವುದನ್ನು ಕಣ್ತುಂಬಿಕೊಳ್ಳಲು ಅವರೇ ಇಲ್ಲವಾಗಿರುವುದು ನೋವಿನ ಸಂಗತಿ’ ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಐಮಂಗಲ ಹೋಬಳಿಯ ಕೆರೆಗಳಿಗೆ ನೀರು ತುಂಬಿಸುವ ಬಗ್ಗೆ ಆಯೋಜಿಸಿದ್ದ ರೈತರು, ಅಧಿಕಾರಿಗಳು ಹಾಗೂ ವಿವಿಧ ಪಕ್ಷದ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಐಮಂಗಲ ಹೋಬಳಿ ಬರಗಾಲಕ್ಕೆ ಕುಖ್ಯಾತಿ ಪಡೆದಿದೆ. ಜಿಲ್ಲೆಯಲ್ಲಿ ಅತಿ ಕಡಿಮೆ ಮಳೆ ಬೀಳುವ ಪ್ರದೇಶವಾಗಿದ್ದು, ಅಂತರ್ಜಲದಲ್ಲಿ ಫ್ಲೋರೈಡ್ ಅಂಶ ಯಥೇಚ್ಛವಾಗಿದೆ. ಈ ಹೋಬಳಿಯ ಕೆರೆಗಳಿಗೆ ನೀರು ತುಂಬಿಸಿದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು, ರೈತರಿಗೆ ನೀರಾವರಿ ಕೃಷಿ ಮಾಡಲು ಅನುಕೂಲವಾಗುತ್ತದೆ. ಸುಧಾಕರಣ್ಣನ ಅನುಪಸ್ಥಿತಿಯಲ್ಲಿ ಸರ್ಕಾರದ ಮೇಲೆ ಒತ್ತಡ ತಂದು ರೈತರ ಸಮಸ್ಯೆ ಪರಿಹರಿಸುತ್ತೇನೆ’ ಎಂದು ಭರವಸೆ ನೀಡಿದರು.

‘ಈ ತಿಂಗಳಾಂತ್ಯದಲ್ಲಿ ಚಿತ್ರದುರ್ಗ ಸಮೀಪದ ಗೋನೂರು ಕೆರೆಗೆ ಪ್ರಯೋಗಾರ್ಥ ಭದ್ರಾ ಮೇಲ್ದಂಡೆ ಯೋಜನೆಯ ನೀರು ಹರಿಸಲಿದ್ದು, ಅದೇ ವೇಳೆ ಐಮಂಗಲ ಭಾಗದ ಕೆರೆಗಳಿಗೂ ನೀರು ಹರಿಸಿದರೆ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥವಾಗಲಿದೆ ಎಂದು ರೈತರು ಮೂರ್ನಾಲ್ಕು ದಿನದ ಹಿಂದೆ ಮನವಿ ಮಾಡಿದ್ದರಿಂದ ಕಾಮಗಾರಿ ವೀಕ್ಷಿಸಿದ್ದೇನೆ. ನೀರು ಹರಿಸುವ ವಿಚಾರದಲ್ಲಿ ರಾಜಕೀಯ ಬೆರೆಸಲು ಹೋಗುವುದಿಲ್ಲ. ಹಿರಿಯೂರು ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಿಲ್ಲ. ಚಿತ್ರದುರ್ಗ ಕ್ಷೇತ್ರದ ಸಮಸ್ಯೆಗಳೇ ಸಾಕಷ್ಟಿವೆ ಎಂದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಬದ್ಧತೆ ತೋರಿಸಿದೆ. ಮೇ 23 ಅಥವಾ 24 ರಂದು ಉಪಮುಖ್ಯಮಂತ್ರಿಯವರು ಖುದ್ದಾಗಿ ಜಿಲ್ಲೆಗೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿ ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ. ಐಮಂಗಲ ಭಾಗದ ಕೆರೆಗಳಿಗೆ ನೀರು ಹರಿಸುವ ಕುರಿತು ವಿಶ್ವೇಶ್ವರಯ್ಯ ಜಲನಿಗಮದ ಎಂಡಿ ಜೊತೆ ಡಿಸಿಎಂ ಚರ್ಚಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರು ಹಾಜರಿರುತ್ತಾರೆ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು.

ಐಮಂಗಲ ಹೋಬಳಿಯ ಗೌನಹಳ್ಳಿ, ಗೌಡನಹಳ್ಳಿ, ಬೀರೇನಹಳ್ಳಿ ಒಳಗೊಂಡಂತೆ ಹತ್ತಾರು ಹಳ್ಳಿಗಳಲ್ಲಿ ಕುಡಿಯುವ ನೀರು, ತೋಟಗಳನ್ನು ರೈತರು ನಡೆಸುತ್ತಿರುವ ಹೆಣಗಾಟದ ಬಗ್ಗೆ ಯುವಮುಖಂಡ ಪಾಂಡುರಂಗ, ಐಮಂಗಲ ಭಾಗದ ಕೆರೆಗಳಿಗೆ ನೀರು ತುಂಬಿಸುವ ಹೋರಾಟ ಸಮಿತಿ ಅಧ್ಯಕ್ಷ ತಿಪ್ಪೀರಣ್ಣ ಸಭೆಯ ಗಮನ ಸೆಳೆದರು.

ಇಲ್ಲಿ ಪಕ್ಷ ರಾಜಕೀಯ ಬಿಟ್ಟು ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ನಡೆಯಬೇಕಿದೆ ಎಂದು ಬಿಜೆಪಿ ಮುಖಂಡ ಎನ್.ಆರ್. ಲಕ್ಷ್ಮೀಕಾಂತ್ ಸಲಹೆ ನೀಡಿದರು.

ಸುಧಾಕರ್ ನಿಧನರಾಗಿ ಕೆಲವೇ ದಿನಗಳಲ್ಲಿ ಜಿಲ್ಲೆಯ ಇತರೆ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಮಾಹಿತಿಯಿಲ್ಲದೇ ಭದ್ರಾ ಕಾಮಗಾರಿ ವೀಕ್ಷಿಸುವುದು ಸರಿಯಲ್ಲ. ಎಲ್ಲಾ ಶಾಸಕರು ಹಾಗೂ ಕಾರ್ಯಕರ್ತರನ್ನು ಒಳಗೊಂಡಂತೆ ಪಕ್ಷಾತೀತವಾಗಿ ವೀಕ್ಷಿಸಿ ನೀರು ಹರಿಸುವ ಕೆಲಸ ಮಾಡಿದರೆ ಸುಧಾಕರ್ ಆತ್ಮಕ್ಕೆ ಶಾಂತಿ ಸಿಗಲಿದೆ ಎಂದು ಗ್ಯಾರಂಟಿ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ ತಿಳಿಸಿದರು.

ಗ್ಯಾರಂಟಿ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್, ಈರಲಿಂಗೇಗೌಡ, ಟಿ. ಚಂದ್ರಶೇಖರ್, ಕಲ್ಲಟ್ಟಿ ಹರೀಶ್, ಕಂದಿಕೆರೆ ಸುರೇಶ್ ಬಾಬು, ರೈತ ಮುಖಂಡ ಯಶವಂತ್, ಗೀತಾನಂದಿನಿಗೌಡ, ಹರ್ತಿಕೋಟೆ ತಿಪ್ಪೇಸ್ವಾಮಿ, ಜ್ಞಾನೇಶ್ ಹಾಗೂ ಐಮಂಗಲ ಭಾಗದ ರೈತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-44-155772307

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.