ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡುಗೊಲ್ಲರಿಗೆ ಎಸ್ಟಿ ಮೀಸಲಾತಿ ಜಾರಿಗೆ ಒತ್ತಾಯ

Published 5 ಜೂನ್ 2024, 16:07 IST
Last Updated 5 ಜೂನ್ 2024, 16:07 IST
ಅಕ್ಷರ ಗಾತ್ರ

ಹಿರಿಯೂರು: ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸಿದರೆ ಕೇಂದ್ರದಲ್ಲಿ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಲೋಕಸಭಾ ಚುನಾವಣೆ ಪೂರ್ವದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಹೇಳಿದ್ದ ಮಾತನ್ನು ಉಳಿಸಿಕೊಳ್ಳಬೇಕು ಎಂದು ಕಾಡುಗೊಲ್ಲ ಸಮಾಜದ ಮುಖಂಡ ಎನ್.ಧನಂಜಯ ಮನವಿ ಮಾಡಿದ್ದಾರೆ.

‘ಚಿತ್ರದುರ್ಗ ಮತ್ತು ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿಗಳ ಗೆಲುವಿನಲ್ಲಿ ಕಾಡುಗೊಲ್ಲ ಸಮಾಜ ನಿರ್ಣಾಯಕ ಪಾತ್ರ ವಹಿಸುವುದರ ಮೂಲಕ ದೇವೇಗೌಡರ ಮಾತಿಗೆ ಸ್ಪಂದಿಸಿದೆ. ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸುವ ಪ್ರಸ್ತಾವ ಈಗಾಗಲೇ ಕೇಂದ್ರ ಸರ್ಕಾರದ ಮುಂದಿದ್ದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ತಮ್ಮ ಪ್ರಭಾವ ಬಳಸಿ ಒಪ್ಪಿಗೆ ಪಡೆಯುವ ಮೂಲಕ ನಮ್ಮ ಸಮಾಜಕ್ಕೆ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಡಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT