ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿಗೆ ಒತ್ತಾಯ

ಪರಿಶಿಷ್ಟ ಜಾತಿಗಳ ಒಕ್ಕೂಟದಿಂದ ಸೆ.16 ರಂದು ಧರಣಿಗೆ ನಿರ್ಧಾರ
Published : 14 ಸೆಪ್ಟೆಂಬರ್ 2024, 15:49 IST
Last Updated : 14 ಸೆಪ್ಟೆಂಬರ್ 2024, 15:49 IST
ಫಾಲೋ ಮಾಡಿ
Comments

ಹಿರಿಯೂರು: ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದಿಂದ ಸೆ.16 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಠ ಜಾತಿಗಳ ಚಿತ್ರದುರ್ಗ ಜಿಲ್ಲಾ ಸಮಿತಿ ಸದಸ್ಯ ಬಿ.ಪಿ.ತಿಪ್ಪೇಸ್ವಾಮಿ ಹೇಳಿದ್ದಾರೆ.

ಸೆ.17 ರಂದು ಕಲುಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿ ಮಾಡುವ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುವುದು ಸತ್ಯಾಗ್ರಹದ ಉದ್ದೇಶ ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಧರಣಿಯಲ್ಲಿ ದೇವನೂರು ಮಹಾದೇವ, ನ್ಯಾಯಮೂರ್ತಿ ಗೋಪಾಲ ಗೌಡ, ಡಾ.ಬರಗೂರು ರಾಮಚಂದ್ರಪ್ಪ, ಪ್ರೊ.ರವಿವರ್ಮಕುಮಾರ್, ಸಿ.ಎಸ್.ದ್ವಾರಕನಾಥ್, ಬಂಜೆಗೆರೆ ಜಯಪ್ರಕಾಶ್, ಎಸ್.ಜಿ.ಸಿದ್ದರಾಮಯ್ಯ, ಮೂಡ್ನಾಕೂಡು ಚಿನ್ನಸ್ವಾಮಿ, ಅಂಬಣ್ಣ ಅರೋಲಿಕರ್, ಬಸವರಾಜ್ ಕೌತಳ್, ಎಸ್.ಆರ್.ಹೀರೇಮಠ್, ಪ್ರೊ.ಜಾಫೆಟ್, ಗೋನಾಳ ಭೀಮಪ್ಪ, ಮಾವಳ್ಳಿ ಶಂಕರ್, ಇಂದೂಧರ್ ಹೊನ್ನಾಪುರ, ಹಿರಿಯ ಪತ್ರಕರ್ತ ಡಿ.ಉಮಾಪತಿ, ಬಿ.ಪಿ.ಪ್ರಕಾಶ್ ಮೂರ್ತಿ ಮುಂತಾದ ನಾಯಕರು ಭಾಗವಹಿಸುತ್ತಿದ್ದಾರೆ ಎಂದಿದ್ದಾರೆ.

ಇದಕ್ಕೆ ಪೂರಕ ವಾತಾವರಣವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕಲ್ಪಿಸಿಕೊಡಬೇಕು. ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರುವ ಮುಖ್ಯಮಂತ್ರಿ, ಶೀಘ್ರ ಕಾರ್ಯ ಪ್ರವೃತ್ತರಾಗಬೇಕು ಎಂದು ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT