ಹಿರಿಯೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ಚಾಲಕರಿಗೆ ತಲಾ ₹ 10,000 ದಂಡ ವಿಧಿಸಿ ನಗರದ ಜೆಎಂಎಫ್ಸಿ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ.

2025 ಜ. 7ರಂದು ರಾತ್ರಿ ಐಮಂಗಲ ಸಿಪಿಐ ಎನ್.ಗುಡ್ಡಪ್ಪ ಹಾಗೂ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿ ಗುಯಿಲಾಳು ಟೋಲ್ ಬಳಿ ಇರುವಾಗ ಕ್ಯಾಂಟರ್ ಲಾರಿ ಚಾಲಕ ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನ ತೀರ್ಥ ಗ್ರಾಮದ ಈರಣ್ಣಗೌಡ ಪಾಟೀಲ್ ಹಾಗೂ ಹಿರಿಯೂರು ತಾಲ್ಲೂಕಿನ ಸೂರಗೊಂಡನಹಳ್ಳಿ ಗ್ರಾಮದ ಚಾಲಕ ಪ್ರದೀಪ್ ಅವರು ಪಾನಮತ್ತರಾಗಿ ವಾಹನ ಚಾಲನೆ ಮಾಡುತ್ತಿದ್ದರು. ಅವರನ್ನು ಪರೀಕ್ಷಿಸಿದಾಗ ಮದ್ಯಪಾನ ಮಾಡಿರುವುದು ದೃಢಪಟ್ಟ ಕಾರಣ ನ್ಯಾಯಾಲಯವು ತಲಾ ₹ 10,000 ದಂಡ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.