ಹಿರಿಯೂರು: ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಮಾತ್ರ ಮುಖ್ಯವಾಗದೆ, ಶಿಸ್ತು, ನಾಯಕತ್ವ ಬೆಳವಣಿಗೆಗೂ ಸಹಕಾರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.

ನಗರದ ಹುಳಿಯಾರು ರಸ್ತೆಯಲ್ಲಿರುವ ತಾಲ್ಲೂಕು ಕ್ರೀಡಾಂಗಣದಲ್ಲಿ ಶನಿವಾರ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಶ್ರೀರಂಗನಾಥ ಪಿಯು ಕಾಲೇಜು ನೇತೃತ್ವದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

1996ರಲ್ಲಿ ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣವನ್ನು ಅನುಷ್ಠಾನಕ್ಕೆ ತರಲಾಯಿತು. ವಿದ್ಯಾರ್ಥಿಗಳಿಗೆ ಅಂದಿನಿಂದ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಅವಕಾಶ ದೊರೆತಿದೆ. ಸರ್ಕಾರಿ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದೇ ಇರುವುದು ದೊಡ್ಡ ಕೊರತೆಯಾಗಿದೆ. ಹೆಚ್ಚಿನ ಸಂಖ್ಯೆಯ ದಾಖಲಾತಿ ಹೊಂದಿರುವ ಕೆಲವೇ ಅನುದಾನಿತ ಕಾಲೇಜುಗಳಲ್ಲಿ ಮಾತ್ರ ದೈಹಿಕ ಶಿಕ್ಷಕರಿದ್ದಾರೆ ಎಂದು ಉಪ ನಿರ್ದೇಶಕ ಕೆ. ತಿಮ್ಮಯ್ಯ ತಿಳಿಸಿದರು.

ರಂಗನಾಥ ಪಿಯು ಕಾಲೇಜು ಕಾರ್ಯದರ್ಶಿ ವೀರ ಕರಿಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಬಾಲಕೃಷ್ಣ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್. ಮಮತಾ, ಸಣ್ಣಪ್ಪ, ಪೌರಾಯುಕ್ತ ಎಂ. ವಾಸೀಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಪ್ರಾಂಶುಪಾಲರಾದ ನಾಗರಾಜ್, ತಿಪ್ಪೇಸ್ವಾಮಿ, ವೇದಮೂರ್ತಿ, ಕುಮಾರ್, ಕೆ. ರಂಗಪ್ಪ, ಉಪನ್ಯಾಸಕ ಸಂಘದ ಕೆ.ಆರ್. ತಿಪ್ಪೇಸ್ವಾಮಿ, ದೈಹಿಕ ಶಿಕ್ಷಣ ಪರೀವಿಕ್ಷಕ ರವೀಂದ್ರ ನಾಯ್ಕ್, ದೈಹಿಕ ಶಿಕ್ಷಕರಾದ ಮಹೇಶ್, ತಿಪ್ಪೇಸ್ವಾಮಿ, ಸೋಮಣ್ಣ, ಭೈರೇಶ್ ಪಾಟೀಲ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.