ಹಿರಿಯೂರು: ತಾಲ್ಲೂಕಿನ ಹುಲುಗಲಕುಂಟೆ ಗ್ರಾಮದ ಸಮೀಪ 40 ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಮಿಕ ಶಾಲೆ ಆರಂಭಿಸಲು ಮಂಜೂರಾತಿ ದೊರೆತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.

ನಗರದ ಗುರುಭವನದಲ್ಲಿ ಶನಿವಾರ ಶಾಲಾ ಶಿಕ್ಷಣ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಮತ್ತು ಹಿರಿಯೂರು ತಾಲ್ಲೂಕಿನ ಪ್ರಾಚೀನ ಸ್ಮಾರಕಗಳು ಪುಸ್ತಕ ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕ ವಸತಿ ಶಾಲೆ ಆರಂಭಗೊಂಡರೆ ದುಡಿಯುವ ವರ್ಗದವರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಲಿದ್ದು, ಭವಿಷ್ಯದಲ್ಲಿ ಅವರೆಲ್ಲ ಸಮಾಜದ ಮುಖ್ಯ ವಾಹಿನಿಗೆ ಬರಲು ನೆರವಾಗಲಿದೆ ಅವರು ತಿಳಿಸಿದರು.

ಬಡ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಸಿಗುವುದು ಕಷ್ಟ. ಈ ಕಾರಣಕ್ಕೆ ಸರ್ಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಆರಂಭಿಸಿದೆ. ಮಕ್ಕಳು ಓದಿನ ಕಡೆ ಹೆಚ್ಚು ಗಮನ ಕೊಡಬೇಕು. ಬಿಡುವಿದ್ದಾಗ ಸಂಗೀತ, ನೃತ್ಯ, ಜಾನಪದ ಕಲೆ, ನಾಟಕದ ಬಗ್ಗೆ ಅನುಭವ ಗಳಿಸಿಕೊಳ್ಳಬೇಕು ಎಂದು ಸೂಚಿಸಿದರು.

ತಾಲ್ಲೂಕಿನ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಪ್ರಾಚೀನ ಸ್ಮಾರಕಗಳು ಪುಸ್ತಕವನ್ನು 35 ಶಿಕ್ಷಕರ ಸಹಕಾರದೊಂದಿಗೆ ಹೊರತರಲಾಗಿದೆ. 91 ಗ್ರಾಮ, 309 ಛಾಯಾಚಿತ್ರ ಒಳಗೊಂಡ 228 ಪುಟದ ಪುಸ್ತಕವನ್ನು ಅಚ್ಚು ಹಾಕಿಸುವುದು ಸವಾಲಿನ ಕೆಲಸವಾಗಿತ್ತು. ಸಚಿವ ಸುಧಾಕರ್ ಅವರು ಇದರ ಜವಾಬ್ದಾರಿ ಹೊತ್ತರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ. ತಿಪ್ಪೇಸ್ವಾಮಿ ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್. ಮಂಜುನಾಥ್, ಅಭಿವೃದ್ಧಿ ವಿಭಾಗದ ಉಪನಿರ್ದೇಶಕ ಎಂ. ನಾಸಿರುದ್ದೀನ್, ಆರ್. ರಮೇಶ್, ವಿ.ಭಾಗ್ಯ, ಕೆ.ಆರ್. ತಿಪ್ಪೇಸ್ವಾಮಿ, ಎಂ. ಲೋಹಿತ್, ಎಚ್.ಅಶೋಕ್, ಲೋಕಮ್ಮ, ಶಿವಲಿಂಗಪ್ಪ, ಆರ್.ಟಿ.ಎಸ್.ಶ್ರೀನಿವಾಸ್, ಮಹೇಶ್ವರ ರೆಡ್ಡಿ, ಆರ್.ಟಿ. ರವೀಂದ್ರನಾಯ್ಕ, ಮುಖಂಡರಾದ ಖಾದಿ ರಮೇಶ್, ಈರಲಿಂಗೇಗೌಡ, ಕಂದಿಕೆರೆ ಸುರೇಶ್ ಬಾಬು, ಈ. ಮಂಜುನಾಥ್, ಜಿ.ಎಲ್. ಮೂರ್ತಿ, ಕಲ್ಲಹಟ್ಟಿ ಹರೀಶ್, ದಿಂಡಾವರ ಮಹೇಶ್, ಜ್ಞಾನೇಶ್, ವಿ. ಶಿವಕುಮಾರ್ ಉಪಸ್ಥಿತರಿದ್ದರು. ಸಿ. ಶಿವಾನಂದ್ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.