ಹಿರಿಯೂರು: ‘ನಟ ರಾಜಕುಮಾರ್ ಸ್ಮಾರಕ ಜಾಗದ ಕುರಿತು ಅಪಸ್ವರ ಎತ್ತಿರುವ ನಟ ಚೇತನ್ ಅಹಿಂಸಾ ಅವರನ್ನು ಗಡಿಪಾರು ಮಾಡಬೇಕು’ ಎಂದು ಆಗ್ರಹಿಸಿ ಮಂಗಳವಾರ ಅಖಿಲ ಕರ್ನಾಟಕ ರಾಜಕುಮಾರ್ ಅಭಿಮಾನಿಗಳ ಸಂಘದ ತಾಲ್ಲೂಕು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಎಂ. ಸಿದ್ದೇಶ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ರವಾನಿಸಲಾಯಿತು.

‘ನಾಡಿನ ಭಾಷೆ, ಸಂಸ್ಕೃತಿ, ಪರಂಪರೆಗೆ ರಾಜಕುಮಾರ್ ನೀಡಿರುವ ಕೊಡುಗೆ ಅಪಾರ. ಅವರಿಂದ ಕರ್ನಾಟಕದ ಹೆಸರು ಜಗದ್ವಿಖ್ಯಾತಿ ಪಡೆಯುವಂತಾಗಿದೆ. ಅಂತಹ ಮಹಾನ್ ವ್ಯಕ್ತಿಯ ಜಾಗದ ಬಗ್ಗೆ ಚೇತನ್ ಅಪಸ್ವರ ತೆಗೆದಿರುವುದು ನೋವಿನ ಸಂಗತಿ’ ಎಂದು ಪ್ರತಿಭಟನಕಾರರು ಬೇಸರ ವ್ಯಕ್ತಪಡಿಸಿದರು.

‘20 ವರ್ಷಗಳ ಹಿಂದೆ ಸರ್ಕಾರ ಸ್ವ–ಇಚ್ಛೆಯಿಂದ ನೀಡಿರುವ ಜಾಗದ ಬಗ್ಗೆ ಸಾರ್ವಜನಿಕವಾಗಿ ಆಕ್ಷೇಪ ಎತ್ತಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಚೇತನ್ ಅವರು ಪ್ರಚಾರಕ್ಕೆ ಆಗಾಗ ಗೊಂದಲದ ಹೇಳಿಕೆಗಳನ್ನು ನೀಡುತ್ತಾರೆ. ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿರುವ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು’ ಎಂದು ಆಗ್ರಹಿಸಿದರು.

ಸಂಘದ ಗೌರವಾಧ್ಯಕ್ಷ ವಿ.ಟಿ. ತಿಪ್ಪೇಸ್ವಾಮಿ, ಕಾರ್ಯಾಧ್ಯಕ್ಷ ಈ.ಜಿ.ಎಸ್. ಗೋವಿಂದಪ್ಪ, ಅಧ್ಯಕ್ಷ ಮ್ಯಾಕ್ಲೂರಹಳ್ಳಿ ಕರಿಯಣ್ಣ, ಉಪಾಧ್ಯಕ್ಷ ಮಹೇಶ್, ಖಜಾಂಚಿ ಬಸವರಾಜ್, ಕಾರ್ಯದರ್ಶಿ ಚಿನ್ನಯ್ಯನಹಟ್ಟಿ ಆರ್. ಗೋವಿಂದ, ಹಿರಿಯ ಸಾಮಾಜಿಕ ಹೋರಾಟಗಾರ ಕೇಶವಮೂರ್ತಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-44-278155571

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.