ಹಿರಿಯೂರು: ತಾಲ್ಲೂಕಿನ ಆದಿವಾಲ ಗ್ರಾಮದ ನೆಹರು ಗ್ರಾಮಾಂತರ ಪ್ರೌಢಶಾಲೆ ಆವರಣದಲ್ಲಿ ಮೇ 9ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ರವರೆಗೆ ಆದಿವಾಲ ಫಾರಂನ ಎ.ಪಿ.ಜೆ. ವಿಲೇಜ್ ಟ್ರೀ ಫೌಂಡೇಷನ್ನ ‘ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ’ ಅಭಿಯಾನದಡಿ ಆರೋಗ್ಯ ಉಚಿತ ತಪಾಸಣೆ ಹಾಗೂ ಮೇ 10 ರಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ವೈದೇಹಿ ಆಸ್ಪತ್ರೆ, ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ, ಹಿರಿಯೂರಿನ ಸುರಕ್ಷಾ ಕ್ಲಿನಿಕ್, ದೃಷ್ಟಿಧಾಮ ಕಣ್ಣಿನ ಆಸ್ಪತ್ರೆಯ ತಜ್ಞ ವೈದ್ಯರು ಹೃದಯ, ನರರೋಗ, ಕಿಡ್ನಿ, ಕ್ಯಾನ್ಸರ್, ಮೂಳೆ, ಕಿವಿ–ಮೂಗು–ಗಂಟಲಿನ ಬಗ್ಗೆ ವೈದ್ಯಕೀಯ ಸಲಹೆ ಹಾಗೂ ನೇತ್ರ ಪರೀಕ್ಷೆ ನಡೆಸುತ್ತಾರೆ. ಆಯುಷ್ ಇಲಾಖೆಯಿಂದ ಮಂಡಿ ನೋವು ಇದ್ದವರಿಗೆ ತಪಾಸಣೆ ಮಾಡಿ, ಅಗತ್ಯವುಳ್ಳವರಿಗೆ ಪಂಚಕರ್ಮ ಚಿಕಿತ್ಸೆಯನ್ನು ಉಚಿತವಾಗಿ ನೀಡುವರು. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಾಯೋಜಕರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-44-476331908

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.